Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 20

ಯಾಜ 20:10-23

Help us?
Click on verse(s) to share them!
10“‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.
11ಯಾವನಾದರೂ ಮಲತಾಯಿಯನ್ನು ಸಂಗಮಿಸಿದರೆ ಅವನು ತಂದೆಗೆ ಮಾನಭಂಗಮಾಡಿದ ಹಾಗಾಯಿತು; ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
12ಯಾವನಾದರೂ ಸೊಸೆಯನ್ನು ಸಂಗಮಿಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಅವರು ಧರ್ಮವಿರುದ್ಧವಾದ ಕಾರ್ಯವನ್ನು ಮಾಡಿರುವುದರಿಂದ ಆ ಶಿಕ್ಷೆಗೆ ಅವರೇ ಕಾರಣರು.
13ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
14ಯಾವನಾದರೂ ಒಬ್ಬ ಸ್ತ್ರೀಯನ್ನು ಹಾಗೂ ಅವಳ ತಾಯಿಯನ್ನು ಸಂಗಮಿಸಿದರೆ ಅದು ಅತಿದುಷ್ಟಕಾರ್ಯವಾದುದರಿಂದ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು; ಅಂತಹ ದುರಾಚಾರವು ನಿಮ್ಮಲ್ಲಿ ಎಷ್ಟು ಮಾತ್ರವೂ ನಡೆಯಬಾರದು.
15ಯಾವನಾದರೂ ಪಶುಸಂಗ ಮಾಡಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ಆ ಪಶುವನ್ನು ಕೊಲ್ಲಿಸಬೇಕು.
16ಯಾವ ಸ್ತ್ರೀಯಾದರೂ ಪಶುವಿನಿಂದ ಸಂಗಮಮಾಡಿಸಿಕೊಂಡರೆ ಆ ಸ್ತ್ರೀಯನ್ನು ಮತ್ತು ಪಶುವನ್ನು ಕೊಲ್ಲಿಸಬೇಕು; ಅವಳಿಗೂ ಹಾಗೂ ಅದಕ್ಕೂ ಮರಣವೇ ನಿಯಮ; ಆ ಮರಣ ಶಿಕ್ಷೆಗೆ ತಾವೇ ಕಾರಣರು.
17ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಹಾಗು ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದ್ದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.
18ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ರಕ್ತಸ್ರಾವದ ಸ್ಥಾನವನ್ನು ಬಯಲುಪಡಿಸಿದವನು, ಅವಳು ಬಯಲುಪಡಿಸಿಕೊಂಡವಳು; ಆದುದರಿಂದ ಅವರಿಬ್ಬರನ್ನು ಕುಲದಿಂದ ಹೊರಗೆ ಹಾಕಬೇಕು.
19ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗಮ ಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗಮಿಸಿದವನಾದುದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು.
20ಯಾವನಾದರೂ ದೊಡ್ಡಮ್ಮ ಅಥವಾ ಚಿಕ್ಕಮ್ಮನನ್ನಾಗಲಿ ಸಂಗಮಿಸಿದರೆ ಅವನು ದೊಡ್ಡಪ್ಪ ಮತ್ತು ಚಿಕ್ಕಪ್ಪನವರ ಮಾನವನ್ನು ಭಂಗಪಡಿಸಿದವನಾದುದರಿಂದ ಆ ಸ್ತ್ರೀಪುರುಷರು ಆ ಪಾಪದ ಫಲವನ್ನು ಅನುಭವಿಸಬೇಕು; ಅವರು ಸಂತಾನವಿಲ್ಲದೆ ಸಾಯುವರು.
21ಯಾವನಾದರೂ ಅತ್ತಿಗೆ ಇಲ್ಲವೇ ನಾದಿನಿಯರನ್ನು ಸಂಗಮಿಸಿದರೆ ಅದು ಅಶುದ್ಧವಾದ ಕೆಲಸ; ಅವನು ಅಣ್ಣತಮ್ಮಂದಿರ ಮಾನವನ್ನೇ ಭಂಗಪಡಿಸಿದವನು; ಅವರಿಗೆ ಸಂತಾನವಿರುವುದಿಲ್ಲ.
22“‘ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ತ್ಯಜಿಸುವುದಿಲ್ಲ.
23ನಾನು ನಿಮಗಿಂತ ಮೊದಲು ಹೊರಡಿಸಿದ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದ್ದರಿಂದ ನನಗೆ ಅಸಹ್ಯವಾದಾರು.

Read ಯಾಜ 20ಯಾಜ 20
Compare ಯಾಜ 20:10-23ಯಾಜ 20:10-23