Text copied!
Bibles in Kannada

ಯಾಜ 20:18-27 in Kannada

Help us?

ಯಾಜ 20:18-27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ರಕ್ತಸ್ರಾವದ ಸ್ಥಾನವನ್ನು ಬಯಲುಪಡಿಸಿದವನು, ಅವಳು ಬಯಲುಪಡಿಸಿಕೊಂಡವಳು; ಆದುದರಿಂದ ಅವರಿಬ್ಬರನ್ನು ಕುಲದಿಂದ ಹೊರಗೆ ಹಾಕಬೇಕು.
19 ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗಮ ಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗಮಿಸಿದವನಾದುದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು.
20 ಯಾವನಾದರೂ ದೊಡ್ಡಮ್ಮ ಅಥವಾ ಚಿಕ್ಕಮ್ಮನನ್ನಾಗಲಿ ಸಂಗಮಿಸಿದರೆ ಅವನು ದೊಡ್ಡಪ್ಪ ಮತ್ತು ಚಿಕ್ಕಪ್ಪನವರ ಮಾನವನ್ನು ಭಂಗಪಡಿಸಿದವನಾದುದರಿಂದ ಆ ಸ್ತ್ರೀಪುರುಷರು ಆ ಪಾಪದ ಫಲವನ್ನು ಅನುಭವಿಸಬೇಕು; ಅವರು ಸಂತಾನವಿಲ್ಲದೆ ಸಾಯುವರು.
21 ಯಾವನಾದರೂ ಅತ್ತಿಗೆ ಇಲ್ಲವೇ ನಾದಿನಿಯರನ್ನು ಸಂಗಮಿಸಿದರೆ ಅದು ಅಶುದ್ಧವಾದ ಕೆಲಸ; ಅವನು ಅಣ್ಣತಮ್ಮಂದಿರ ಮಾನವನ್ನೇ ಭಂಗಪಡಿಸಿದವನು; ಅವರಿಗೆ ಸಂತಾನವಿರುವುದಿಲ್ಲ.
22 “‘ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ತ್ಯಜಿಸುವುದಿಲ್ಲ.
23 ನಾನು ನಿಮಗಿಂತ ಮೊದಲು ಹೊರಡಿಸಿದ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದ್ದರಿಂದ ನನಗೆ ಅಸಹ್ಯವಾದಾರು.
24 ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.
25 “‘ನೀವು ಶುದ್ಧ ಮತ್ತು ಅಶುದ್ಧ ಪಶುಗಳನ್ನು ಹಾಗು ಪಕ್ಷಿಗಳನ್ನು ಪ್ರತ್ಯೇಕಿಸುವ ವಿವೇಚನೆ ಹೊಂದಿರಬೇಕು. ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪಶು, ಪಕ್ಷಿ ಹಾಗು ಕ್ರಿಮಿಕೀಟಗಳಿಂದಲೂ ನಿಮ್ಮನ್ನು ಅಸಹ್ಯಮಾಡಿಕೊಳ್ಳಬಾರದು.
26 ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದುದರಿಂದ ನೀವು ನನಗೆ ಮೀಸಲಾಗಿರಬೇಕು.
27 “‘ಸತ್ತವರಲ್ಲಿ ವಿಚಾರಿಸುವವರೂ, ಬೇತಾಳಿಕರೂ ಅವರು ಸ್ತ್ರೀಯರಾಗಲಿ ಅಥವಾ ಪುರುಷರಾಗಲಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು’” ಎಂದು ಹೇಳಿದನು.
ಯಾಜ 20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019