Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 20

ಯಾಜ 20:3-13

Help us?
Click on verse(s) to share them!
3ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು, ನನ್ನ ದೇವಸ್ಥಾನವನ್ನು ಅಶುದ್ಧಮಾಡಿ, ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದರೆ, ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.
4ಆ ಮನುಷ್ಯನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟಾಗ ಸ್ವದೇಶದವರು ಅವನನ್ನು ಕೊಲ್ಲದೆ ಅವನು ಮಾಡಿದ ಕೆಲಸವನ್ನು ನೋಡಿಯೂ ನೋಡದವರಂತಿದ್ದರೆ,
5ಆಗ ನಾನು ಆ ಮನುಷ್ಯನಿಗೂ ಮತ್ತು ಅವನ ಕುಟುಂಬದವರಿಗೂ ವಿಮುಖನಾಗಿ ಅವನನ್ನು ಮಾತ್ರವಲ್ಲದೆ, ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕನಿಗೆ ಸೇವೆ ಮಾಡಿದವರೆಲ್ಲರನ್ನು ಕುಲದಿಂದ ತೆಗೆದುಹಾಕುವೆನು.
6“‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.
7ನಾನು ನಿಮ್ಮ ದೇವರಾದ ಯೆಹೋವನಾಗಿರುವುದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.
8ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪರಿಶುದ್ಧಜನವಾಗುವಂತೆ ಮಾಡುವ ಯೆಹೋವನು.
9“‘ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.
10“‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.
11ಯಾವನಾದರೂ ಮಲತಾಯಿಯನ್ನು ಸಂಗಮಿಸಿದರೆ ಅವನು ತಂದೆಗೆ ಮಾನಭಂಗಮಾಡಿದ ಹಾಗಾಯಿತು; ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
12ಯಾವನಾದರೂ ಸೊಸೆಯನ್ನು ಸಂಗಮಿಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಅವರು ಧರ್ಮವಿರುದ್ಧವಾದ ಕಾರ್ಯವನ್ನು ಮಾಡಿರುವುದರಿಂದ ಆ ಶಿಕ್ಷೆಗೆ ಅವರೇ ಕಾರಣರು.
13ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.

Read ಯಾಜ 20ಯಾಜ 20
Compare ಯಾಜ 20:3-13ಯಾಜ 20:3-13