Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 20

ಯಾಜ 20:7-16

Help us?
Click on verse(s) to share them!
7ನಾನು ನಿಮ್ಮ ದೇವರಾದ ಯೆಹೋವನಾಗಿರುವುದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.
8ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪರಿಶುದ್ಧಜನವಾಗುವಂತೆ ಮಾಡುವ ಯೆಹೋವನು.
9“‘ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.
10“‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.
11ಯಾವನಾದರೂ ಮಲತಾಯಿಯನ್ನು ಸಂಗಮಿಸಿದರೆ ಅವನು ತಂದೆಗೆ ಮಾನಭಂಗಮಾಡಿದ ಹಾಗಾಯಿತು; ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
12ಯಾವನಾದರೂ ಸೊಸೆಯನ್ನು ಸಂಗಮಿಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಅವರು ಧರ್ಮವಿರುದ್ಧವಾದ ಕಾರ್ಯವನ್ನು ಮಾಡಿರುವುದರಿಂದ ಆ ಶಿಕ್ಷೆಗೆ ಅವರೇ ಕಾರಣರು.
13ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
14ಯಾವನಾದರೂ ಒಬ್ಬ ಸ್ತ್ರೀಯನ್ನು ಹಾಗೂ ಅವಳ ತಾಯಿಯನ್ನು ಸಂಗಮಿಸಿದರೆ ಅದು ಅತಿದುಷ್ಟಕಾರ್ಯವಾದುದರಿಂದ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು; ಅಂತಹ ದುರಾಚಾರವು ನಿಮ್ಮಲ್ಲಿ ಎಷ್ಟು ಮಾತ್ರವೂ ನಡೆಯಬಾರದು.
15ಯಾವನಾದರೂ ಪಶುಸಂಗ ಮಾಡಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ಆ ಪಶುವನ್ನು ಕೊಲ್ಲಿಸಬೇಕು.
16ಯಾವ ಸ್ತ್ರೀಯಾದರೂ ಪಶುವಿನಿಂದ ಸಂಗಮಮಾಡಿಸಿಕೊಂಡರೆ ಆ ಸ್ತ್ರೀಯನ್ನು ಮತ್ತು ಪಶುವನ್ನು ಕೊಲ್ಲಿಸಬೇಕು; ಅವಳಿಗೂ ಹಾಗೂ ಅದಕ್ಕೂ ಮರಣವೇ ನಿಯಮ; ಆ ಮರಣ ಶಿಕ್ಷೆಗೆ ತಾವೇ ಕಾರಣರು.

Read ಯಾಜ 20ಯಾಜ 20
Compare ಯಾಜ 20:7-16ಯಾಜ 20:7-16