Text copied!
Bibles in Kannada

ಯಾಜ 20:7-16 in Kannada

Help us?

ಯಾಜ 20:7-16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ನಿಮ್ಮ ದೇವರಾದ ಯೆಹೋವನಾಗಿರುವುದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.
8 ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪರಿಶುದ್ಧಜನವಾಗುವಂತೆ ಮಾಡುವ ಯೆಹೋವನು.
9 “‘ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.
10 “‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.
11 ಯಾವನಾದರೂ ಮಲತಾಯಿಯನ್ನು ಸಂಗಮಿಸಿದರೆ ಅವನು ತಂದೆಗೆ ಮಾನಭಂಗಮಾಡಿದ ಹಾಗಾಯಿತು; ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
12 ಯಾವನಾದರೂ ಸೊಸೆಯನ್ನು ಸಂಗಮಿಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಅವರು ಧರ್ಮವಿರುದ್ಧವಾದ ಕಾರ್ಯವನ್ನು ಮಾಡಿರುವುದರಿಂದ ಆ ಶಿಕ್ಷೆಗೆ ಅವರೇ ಕಾರಣರು.
13 ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
14 ಯಾವನಾದರೂ ಒಬ್ಬ ಸ್ತ್ರೀಯನ್ನು ಹಾಗೂ ಅವಳ ತಾಯಿಯನ್ನು ಸಂಗಮಿಸಿದರೆ ಅದು ಅತಿದುಷ್ಟಕಾರ್ಯವಾದುದರಿಂದ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು; ಅಂತಹ ದುರಾಚಾರವು ನಿಮ್ಮಲ್ಲಿ ಎಷ್ಟು ಮಾತ್ರವೂ ನಡೆಯಬಾರದು.
15 ಯಾವನಾದರೂ ಪಶುಸಂಗ ಮಾಡಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ಆ ಪಶುವನ್ನು ಕೊಲ್ಲಿಸಬೇಕು.
16 ಯಾವ ಸ್ತ್ರೀಯಾದರೂ ಪಶುವಿನಿಂದ ಸಂಗಮಮಾಡಿಸಿಕೊಂಡರೆ ಆ ಸ್ತ್ರೀಯನ್ನು ಮತ್ತು ಪಶುವನ್ನು ಕೊಲ್ಲಿಸಬೇಕು; ಅವಳಿಗೂ ಹಾಗೂ ಅದಕ್ಕೂ ಮರಣವೇ ನಿಯಮ; ಆ ಮರಣ ಶಿಕ್ಷೆಗೆ ತಾವೇ ಕಾರಣರು.
ಯಾಜ 20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019