Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 21

ಯಾಜ 21:1-8

Help us?
Click on verse(s) to share them!
1ಯೆಹೋವನು ಮೋಶೆಯೊಂದಿಗೆ ಮಾತನಾಡಿ, “ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು, ‘ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.
2ಆದರೂ ಸಮೀಪ ರಕ್ತಸಂಬಂಧಿಗಳಾದ ತಾಯಿ, ತಂದೆ, ಮಕ್ಕಳು ಮತ್ತು ಅಣ್ಣತಮ್ಮಂದಿರು ಇವರಿಗೋಸ್ಕರ ಈ ನಿಯಮ ಇರುವುದಿಲ್ಲ.
3ಇದಲ್ಲದೆ ಕನ್ನಿಕೆಯಾಗಿರುವ ತಂಗಿ ಇನ್ನು ಮದುವೆಯಾಗದೆ ಅವನ ಆಶ್ರಯದಲ್ಲಿರುವುದರಿಂದ ಅವಳಿಗೋಸ್ಕರ ಅವನು ಅಪವಿತ್ರ ಮಾಡಿಕೊಳ್ಳಬಹುದು.
4ಅವನು ಕುಲದಲ್ಲಿ ನಾಯಕನಾಗಿರುವುದರಿಂದ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು, ಮಾಡಿದರೆ ಯಾಜಕಸೇವೆಗೆ ಅಯೋಗ್ಯನಾದಾನು.
5ಅವರು ತಲೆಬೋಳಿಸಿಕೊಳ್ಳಬಾರದು, ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು.
6ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.
7ಯಾಜಕರು ತಮ್ಮ ದೇವರಿಗೆ ಮೀಸಲಾದವರು ಆಗಿರುವುದರಿಂದ ವೇಶ್ಯ ಸ್ತ್ರೀಯನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.
8ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು.

Read ಯಾಜ 21ಯಾಜ 21
Compare ಯಾಜ 21:1-8ಯಾಜ 21:1-8