Text copied!
Bibles in Kannada

ಯಾಜ 21:12-20 in Kannada

Help us?

ಯಾಜ 21:12-20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಕ್ಕಾಗಿ ಅವನು ದೇವಸ್ಥಾನವನ್ನು ಬಿಡಲೇ ಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವರ ಮಂದಿರದ ಗೌರವಕ್ಕೆ ಕುಂದು ಬರುವುದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ, ನಾನು ಯೆಹೋವನು.
13 ಅವನು ಕನ್ನಿಕೆಯನ್ನು ಮದುವೆ ಮಾಡಿಕೊಳ್ಳಬೇಕು.
14 ಅವನು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ವೇಶ್ಯ ಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯ ಕನ್ನಿಕೆಯನ್ನೇ ಮದುವೆ ಮಾಡಿಕೊಳ್ಳಬೇಕು.
15 ಇಲ್ಲವಾದರೆ ಅವನ ಸಂತತಿಯ ಸ್ವಜನರೊಳಗೆ ಅವನು ಅಪವಾದಕ್ಕೆ ಗುರಿಯಾಗುವನು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.
16 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
17 “ನೀನು ಆರೋನನಿಗೆ ಹೀಗೆ ಆಜ್ಞಾಪಿಸು, ‘ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗವಿಕಲನೂ ದೇವರ ಆಹಾರವನ್ನು ಸಮರ್ಪಿಸುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ಅಂಗವಿಕಲನು ಈ ಕಾರ್ಯವನ್ನು ವಹಿಸಿಕೊಳ್ಳಲೇ ಬಾರದು.
18 ಅವನು ಕುರುಡನಾಗಲಿ, ಕುಂಟನಾಗಲಿ, ವಿಕಾರ ಮುಖವುಳ್ಳವನಾಗಲಿ,
19 ವಿಪರೀತ ಅವಯವಗಳುಳ್ಳವನಾಗಲಿ, ಕೈಕಾಲು ಮುರಿದವನಾಗಲಿ,
20 ಗೂನು ಇಲ್ಲವೇ ಕುಬ್ಜರಾಗಲಿ, ಹೂಗಣ್ಣ ಅಥವಾ ಕಾಯಿಗಣ್ಣನಾಗಲಿ, ಕಜ್ಜಿ, ತುರಿಗಳುಳ್ಳವನಾಗಲಿ,
ಯಾಜ 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019