Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 21

ಯಾಜ 21:13-22

Help us?
Click on verse(s) to share them!
13ಅವನು ಕನ್ನಿಕೆಯನ್ನು ಮದುವೆ ಮಾಡಿಕೊಳ್ಳಬೇಕು.
14ಅವನು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ವೇಶ್ಯ ಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯ ಕನ್ನಿಕೆಯನ್ನೇ ಮದುವೆ ಮಾಡಿಕೊಳ್ಳಬೇಕು.
15ಇಲ್ಲವಾದರೆ ಅವನ ಸಂತತಿಯ ಸ್ವಜನರೊಳಗೆ ಅವನು ಅಪವಾದಕ್ಕೆ ಗುರಿಯಾಗುವನು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.
16ಯೆಹೋವನು ಮೋಶೆಯೊಂದಿಗೆ ಮಾತನಾಡಿ,
17“ನೀನು ಆರೋನನಿಗೆ ಹೀಗೆ ಆಜ್ಞಾಪಿಸು, ‘ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗವಿಕಲನೂ ದೇವರ ಆಹಾರವನ್ನು ಸಮರ್ಪಿಸುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ಅಂಗವಿಕಲನು ಈ ಕಾರ್ಯವನ್ನು ವಹಿಸಿಕೊಳ್ಳಲೇ ಬಾರದು.
18ಅವನು ಕುರುಡನಾಗಲಿ, ಕುಂಟನಾಗಲಿ, ವಿಕಾರ ಮುಖವುಳ್ಳವನಾಗಲಿ,
19ವಿಪರೀತ ಅವಯವಗಳುಳ್ಳವನಾಗಲಿ, ಕೈಕಾಲು ಮುರಿದವನಾಗಲಿ,
20ಗೂನು ಇಲ್ಲವೇ ಕುಬ್ಜರಾಗಲಿ, ಹೂಗಣ್ಣ ಅಥವಾ ಕಾಯಿಗಣ್ಣನಾಗಲಿ, ಕಜ್ಜಿ, ತುರಿಗಳುಳ್ಳವನಾಗಲಿ,
21ನಪುಂಸಕನಾಗಲಿ, ಬೇರೆ ಯಾವ ಕಳಂಕವಿದ್ದವನಾಗಲಿ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವುದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವುದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.
22ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.

Read ಯಾಜ 21ಯಾಜ 21
Compare ಯಾಜ 21:13-22ಯಾಜ 21:13-22