Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 21

ಯಾಜ 21:3-7

Help us?
Click on verse(s) to share them!
3ಇದಲ್ಲದೆ ಕನ್ನಿಕೆಯಾಗಿರುವ ತಂಗಿ ಇನ್ನು ಮದುವೆಯಾಗದೆ ಅವನ ಆಶ್ರಯದಲ್ಲಿರುವುದರಿಂದ ಅವಳಿಗೋಸ್ಕರ ಅವನು ಅಪವಿತ್ರ ಮಾಡಿಕೊಳ್ಳಬಹುದು.
4ಅವನು ಕುಲದಲ್ಲಿ ನಾಯಕನಾಗಿರುವುದರಿಂದ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು, ಮಾಡಿದರೆ ಯಾಜಕಸೇವೆಗೆ ಅಯೋಗ್ಯನಾದಾನು.
5ಅವರು ತಲೆಬೋಳಿಸಿಕೊಳ್ಳಬಾರದು, ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು.
6ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.
7ಯಾಜಕರು ತಮ್ಮ ದೇವರಿಗೆ ಮೀಸಲಾದವರು ಆಗಿರುವುದರಿಂದ ವೇಶ್ಯ ಸ್ತ್ರೀಯನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.

Read ಯಾಜ 21ಯಾಜ 21
Compare ಯಾಜ 21:3-7ಯಾಜ 21:3-7