Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 21

ಯಾಜ 21:5-19

Help us?
Click on verse(s) to share them!
5ಅವರು ತಲೆಬೋಳಿಸಿಕೊಳ್ಳಬಾರದು, ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು.
6ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.
7ಯಾಜಕರು ತಮ್ಮ ದೇವರಿಗೆ ಮೀಸಲಾದವರು ಆಗಿರುವುದರಿಂದ ವೇಶ್ಯ ಸ್ತ್ರೀಯನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.
8ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು.
9ಯಾಜಕನ ಮಗಳು ವೇಶ್ಯೆ ಎಂಬ ನಿಂದೆಗೆ ಒಳಗಾದರೆ ತನ್ನ ತಂದೆಯನ್ನು ನಿಂದೆಗೆ ಒಳಪಡಿಸಿದವಳಾದಳು, ಅವಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
10“‘ಮಹಾಯಾಜಕನು ಅಂದರೆ ತನ್ನ ಸಹೋದರರಲ್ಲಿ ಪ್ರಧಾನನು, ಯಾವನು ತೈಲಾಭಿಷೇಕಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ದುಃಖಸೂಚನೆಗಾಗಿ ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು, ಬಟ್ಟೆಗಳನ್ನು ಹರಿದುಕೊಳ್ಳಬಾರದು.
11ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿಮಿತ್ತ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.
12ಇದಕ್ಕಾಗಿ ಅವನು ದೇವಸ್ಥಾನವನ್ನು ಬಿಡಲೇ ಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವರ ಮಂದಿರದ ಗೌರವಕ್ಕೆ ಕುಂದು ಬರುವುದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ, ನಾನು ಯೆಹೋವನು.
13ಅವನು ಕನ್ನಿಕೆಯನ್ನು ಮದುವೆ ಮಾಡಿಕೊಳ್ಳಬೇಕು.
14ಅವನು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ವೇಶ್ಯ ಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯ ಕನ್ನಿಕೆಯನ್ನೇ ಮದುವೆ ಮಾಡಿಕೊಳ್ಳಬೇಕು.
15ಇಲ್ಲವಾದರೆ ಅವನ ಸಂತತಿಯ ಸ್ವಜನರೊಳಗೆ ಅವನು ಅಪವಾದಕ್ಕೆ ಗುರಿಯಾಗುವನು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.
16ಯೆಹೋವನು ಮೋಶೆಯೊಂದಿಗೆ ಮಾತನಾಡಿ,
17“ನೀನು ಆರೋನನಿಗೆ ಹೀಗೆ ಆಜ್ಞಾಪಿಸು, ‘ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗವಿಕಲನೂ ದೇವರ ಆಹಾರವನ್ನು ಸಮರ್ಪಿಸುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ಅಂಗವಿಕಲನು ಈ ಕಾರ್ಯವನ್ನು ವಹಿಸಿಕೊಳ್ಳಲೇ ಬಾರದು.
18ಅವನು ಕುರುಡನಾಗಲಿ, ಕುಂಟನಾಗಲಿ, ವಿಕಾರ ಮುಖವುಳ್ಳವನಾಗಲಿ,
19ವಿಪರೀತ ಅವಯವಗಳುಳ್ಳವನಾಗಲಿ, ಕೈಕಾಲು ಮುರಿದವನಾಗಲಿ,

Read ಯಾಜ 21ಯಾಜ 21
Compare ಯಾಜ 21:5-19ಯಾಜ 21:5-19