Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 22

ಯಾಜ 22:25-30

Help us?
Click on verse(s) to share them!
25ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ’” ಅಂದನು.
26ಯೆಹೋವನು ಮೋಶೆಯೊಂದಿಗೆ ಮಾತನಾಡಿ,
27“ಕರುವಾಗಲಿ, ಕುರಿಮರಿಯಾಗಲಿ ಅಥವಾ ಆಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿನಗಳ ವರೆಗೆ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿನದಿಂದ ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅದು ಅಂಗೀಕಾರವಾಗುವುದು.
28ಹೆತ್ತ ಆಕಳನ್ನು, ಅದರ ಕರುವನ್ನು ಇಲ್ಲವೆ ಈದ ಆಡು, ಕುರಿಗಳನ್ನು, ಅವುಗಳ ಮರಿಗಳನ್ನು ಒಂದೇ ದಿನದಲ್ಲಿ ವಧಿಸಬಾರದು.
29“ನೀವು ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಯೆಹೋವನಿಗೆ ಮಾಡುವ ಯಜ್ಞವನ್ನು ಮೆಚ್ಚಿಗೆಯಾದ ರೀತಿಯಲ್ಲೇ ಸಮರ್ಪಿಸಬೇಕು.
30ಅದೇ ದಿನದಲ್ಲಿ ಅದನ್ನು ಊಟಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು. ನಾನು ಯೆಹೋವನು.

Read ಯಾಜ 22ಯಾಜ 22
Compare ಯಾಜ 22:25-30ಯಾಜ 22:25-30