Text copied!
Bibles in Kannada

ಯಾಜ 23:16-21 in Kannada

Help us?

ಯಾಜ 23:16-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಏಳನೆಯ ಸಬ್ಬತ್ ದಿನದ ಮರುದಿನದಲ್ಲಿ ಯೆಹೋವನಿಗೆ ಹೊಸಬೆಳೆಯ ಧಾನ್ಯನೈವೇದ್ಯವನ್ನು ಸಮರ್ಪಿಸಬೇಕು.
17 ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.
18 ಆ ರೊಟ್ಟಿಗಳೊಡನೆ ಒಂದು ವರ್ಷದ ಪೂರ್ಣಾಂಗವಾದ ಏಳು ಕುರಿಗಳನ್ನು, ಒಂದು ಹೋರಿಯನ್ನು ಮತ್ತು ಎರಡು ಟಗರುಗಳನ್ನು ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆ ಮತ್ತು ಪಾನದ್ರವ್ಯದೊಡನೆ ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುವವು.
19 ಅದಲ್ಲದೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋತವನ್ನು ಮತ್ತು ಸಮಾಧಾನ ಯಜ್ಞಕ್ಕಾಗಿ ಒಂದು ವರ್ಷದ ಎರಡು ಟಗರುಗಳನ್ನು ಸಮರ್ಪಿಸಬೇಕು.
20 ಯಾಜಕನು ಇವುಗಳನ್ನು, ಪ್ರಥಮಫಲದ ರೊಟ್ಟಿಗಳನ್ನು ಮತ್ತು ಎರಡು ಕುರಿಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.
21 ಆ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.
ಯಾಜ 23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019