Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 23

ಯಾಜ 23:20-35

Help us?
Click on verse(s) to share them!
20ಯಾಜಕನು ಇವುಗಳನ್ನು, ಪ್ರಥಮಫಲದ ರೊಟ್ಟಿಗಳನ್ನು ಮತ್ತು ಎರಡು ಕುರಿಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.
21ಆ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.
22“‘ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಹಕ್ಕಲಾಯಬಾರದು. ಇವುಗಳನ್ನು ಬಡವರಿಗೋಸ್ಕರವು ಹಾಗು ಪರದೇಶದವರಿಗೋಸ್ಕರವು ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು’” ಎಂದು ಹೇಳಿದನು.
23ಯೆಹೋವನು ಮೋಶೆಯೊಂದಿಗೆ ಮಾತನಾಡಿ,
24“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತ್ತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಸೇರಬೇಕು.
25ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು; ಯೆಹೋವನಿಗೆ ಹೋಮವನ್ನು ಮಾಡಬೇಕು’” ಅಂದನು.
26ಯೆಹೋವನು ಮೋಶೆಯೊಂದಿಗೆ ಮಾತನಾಡಿ,
27“ಅದೇ ಏಳನೆಯ ತಿಂಗಳಿನ ಹತ್ತನೆಯ ದಿನ ದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.
28ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.
29ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.
30ಯಾವನಾದರೂ ಆ ದಿನದಲ್ಲಿ ಕೆಲಸವನ್ನು ಮಾಡಿದರೆ ಅವನನ್ನು ಇಸ್ರಾಯೇಲರಲ್ಲಿ ಇರದಂತೆ ನಾಶಮಾಡುವೆನು.
31ಆ ದಿನದಲ್ಲಿ ಯಾವ ಕೆಲಸವನ್ನು ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.
32ಆ ಸಬ್ಬತ್ ದಿನವು ಸಂಪೂರ್ಣವಿರಾಮವುಳ್ಳ ದಿನವಾಗಿರಬೇಕು. ಆ ದಿನದಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದ ವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು” ಎಂದು ಹೇಳಿದನು.
33ಯೆಹೋವನು ಮೋಶೆಯೊಂದಿಗೆ ಮಾತನಾಡಿ,
34“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳ ವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು.
35ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ಯಾವ ಉದ್ಯೋಗವನ್ನು ನಡೆಸಬಾರದು.

Read ಯಾಜ 23ಯಾಜ 23
Compare ಯಾಜ 23:20-35ಯಾಜ 23:20-35