Text copied!
Bibles in Kannada

ಯಾಜ 23:27-37 in Kannada

Help us?

ಯಾಜ 23:27-37 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ಅದೇ ಏಳನೆಯ ತಿಂಗಳಿನ ಹತ್ತನೆಯ ದಿನ ದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.
28 ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.
29 ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.
30 ಯಾವನಾದರೂ ಆ ದಿನದಲ್ಲಿ ಕೆಲಸವನ್ನು ಮಾಡಿದರೆ ಅವನನ್ನು ಇಸ್ರಾಯೇಲರಲ್ಲಿ ಇರದಂತೆ ನಾಶಮಾಡುವೆನು.
31 ಆ ದಿನದಲ್ಲಿ ಯಾವ ಕೆಲಸವನ್ನು ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.
32 ಆ ಸಬ್ಬತ್ ದಿನವು ಸಂಪೂರ್ಣವಿರಾಮವುಳ್ಳ ದಿನವಾಗಿರಬೇಕು. ಆ ದಿನದಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದ ವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು” ಎಂದು ಹೇಳಿದನು.
33 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
34 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳ ವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು.
35 ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ಯಾವ ಉದ್ಯೋಗವನ್ನು ನಡೆಸಬಾರದು.
36 ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಸೇರಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು.
37 “‘ಯೆಹೋವನು ನೇಮಿಸಿರುವ ಸಬ್ಬತ್ ದಿನಗಳ ಹೊರತಾಗಿ ಮೇಲೆ ಹೇಳಿದ ದಿನಗಳೇ ಯೆಹೋವನ ಹಬ್ಬದ ದಿನಗಳು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಸೇರುವಂತೆ ನೀವು ಪ್ರಕಟಿಸಬೇಕು. ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು.
ಯಾಜ 23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019