Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 23

ಯಾಜ 23:3-11

Help us?
Click on verse(s) to share them!
3“‘ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.
4“‘ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಪಡಿಸಬೇಕು.
5“‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಯೆಹೋವನು ನೇಮಿಸಿದ ಪಸ್ಕ ಹಬ್ಬವನ್ನು ಆಚರಿಸಬೇಕು.
6ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.
7ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.
8ಏಳು ದಿನಗಳಲ್ಲಿಯೂ ನೀವು ಯೆಹೋವನಿಗೆ ಹೋಮವನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು’” ಅಂದನು.
9ಯೆಹೋವನು ಮೋಶೆಯೊಂದಿಗೆ ಮಾತನಾಡಿ,
10“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ ಜವೆಗೋದಿಯ ಪೈರನ್ನು ಕೊಯ್ಯುವಾಗ, ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು.
11ನೀವು ದೇವರಿಗೆ ಅಂಗೀಕಾರವಾಗುವಂತೆ ಯಾಜಕನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿ ಸಮರ್ಪಿಸುವನು. ಸಬ್ಬತ್ ದಿನದ ಮರು ದಿನದಲ್ಲಿಯೇ ಅದನ್ನು ನಿವಾಳಿಸಬೇಕು.

Read ಯಾಜ 23ಯಾಜ 23
Compare ಯಾಜ 23:3-11ಯಾಜ 23:3-11