Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 23

ಯಾಜ 23:33-42

Help us?
Click on verse(s) to share them!
33ಯೆಹೋವನು ಮೋಶೆಯೊಂದಿಗೆ ಮಾತನಾಡಿ,
34“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳ ವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು.
35ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ಯಾವ ಉದ್ಯೋಗವನ್ನು ನಡೆಸಬಾರದು.
36ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಸೇರಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು.
37“‘ಯೆಹೋವನು ನೇಮಿಸಿರುವ ಸಬ್ಬತ್ ದಿನಗಳ ಹೊರತಾಗಿ ಮೇಲೆ ಹೇಳಿದ ದಿನಗಳೇ ಯೆಹೋವನ ಹಬ್ಬದ ದಿನಗಳು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಸೇರುವಂತೆ ನೀವು ಪ್ರಕಟಿಸಬೇಕು. ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು.
38ಯೆಹೋವನಿಗೆ ಒಪ್ಪಿಸಬೇಕಾದ ಕಪ್ಪ, ಕಾಣಿಕೆ, ಹರಕೆ ಇವುಗಳನ್ನು ನೀವು ಯೆಹೋವನು ನೇಮಿಸಿರುವ ಸಬ್ಬತ್ ದಿನದಲ್ಲಿ ಮಾತ್ರವಲ್ಲದೆ ಮೇಲೆ ಸೂಚಿಸಿರುವ ಹಬ್ಬದ ದಿನಗಳಲ್ಲಿಯೂ ಸಮರ್ಪಿಸಬೇಕು.
39“‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಯೆಹೋವನು ನೇಮಿಸಿದ ಪರ್ಣಶಾಲೆಗಳ ಜಾತ್ರೆಯನ್ನು ಏಳು ದಿನಗಳ ವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಮತ್ತು ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನು ಮಾಡದೆ ಸಂಪೂರ್ಣ ವಿರಾಮದಿಂದಿರಬೇಕು.
40ಮೊದಲನೆಯ ದಿನದಲ್ಲಿ ಶ್ರೇಷ್ಠವೃಕ್ಷದ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳ ವರೆಗೆ ಸಂಭ್ರಮವಾಗಿರಬೇಕು.
41ಹೀಗೆ ಪ್ರತಿ ವರ್ಷದಲ್ಲಿಯೂ ಏಳು ದಿನಗಳ ವರೆಗೆ ಈ ಹಬ್ಬವನ್ನು ಆಚರಿಸಬೇಕು; ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಇದು ಶಾಶ್ವತನಿಯಮ; ಏಳನೆಯ ತಿಂಗಳಿನಲ್ಲಿ ಇದನ್ನು ಆಚರಿಸಬೇಕು.
42ಏಳು ದಿನಗಳು ನೀವು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕು, ಸ್ವದೇಶಸ್ಥರಾದ ಇಸ್ರಾಯೇಲರೆಲ್ಲರೂ ಪರ್ಣಶಾಲೆಗಳಲ್ಲಿಯೇ ವಾಸವಾಗಿರಬೇಕು.

Read ಯಾಜ 23ಯಾಜ 23
Compare ಯಾಜ 23:33-42ಯಾಜ 23:33-42