Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 23

ಯಾಜ 23:4-31

Help us?
Click on verse(s) to share them!
4“‘ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಪಡಿಸಬೇಕು.
5“‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಯೆಹೋವನು ನೇಮಿಸಿದ ಪಸ್ಕ ಹಬ್ಬವನ್ನು ಆಚರಿಸಬೇಕು.
6ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.
7ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.
8ಏಳು ದಿನಗಳಲ್ಲಿಯೂ ನೀವು ಯೆಹೋವನಿಗೆ ಹೋಮವನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು’” ಅಂದನು.
9ಯೆಹೋವನು ಮೋಶೆಯೊಂದಿಗೆ ಮಾತನಾಡಿ,
10“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ ಜವೆಗೋದಿಯ ಪೈರನ್ನು ಕೊಯ್ಯುವಾಗ, ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು.
11ನೀವು ದೇವರಿಗೆ ಅಂಗೀಕಾರವಾಗುವಂತೆ ಯಾಜಕನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿ ಸಮರ್ಪಿಸುವನು. ಸಬ್ಬತ್ ದಿನದ ಮರು ದಿನದಲ್ಲಿಯೇ ಅದನ್ನು ನಿವಾಳಿಸಬೇಕು.
12ಆ ಸಿವುಡನ್ನು ನೈವೇದ್ಯವಾಗಿ ನಿವಾಳಿಸುವ ದಿನದಲ್ಲಿ ನೀವು ಒಂದು ವರ್ಷದ ಪೂರ್ಣಾಂಗವಾದ ಟಗರನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.
13ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.
14ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದು ಕೊಡುವವರೆಗೂ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಬಾರದು. ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.
15“‘ಸಬ್ಬತ್ ದಿನದ ಮರುದಿನದಿಂದ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ನಿವಾಳಿಸಿದ ದಿನ ಮೊದಲುಗೊಂಡು ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ ಐವತ್ತು ದಿನಗಳನ್ನು ಲೆಕ್ಕಿಸಬೇಕು.
16ಏಳನೆಯ ಸಬ್ಬತ್ ದಿನದ ಮರುದಿನದಲ್ಲಿ ಯೆಹೋವನಿಗೆ ಹೊಸಬೆಳೆಯ ಧಾನ್ಯನೈವೇದ್ಯವನ್ನು ಸಮರ್ಪಿಸಬೇಕು.
17ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.
18ಆ ರೊಟ್ಟಿಗಳೊಡನೆ ಒಂದು ವರ್ಷದ ಪೂರ್ಣಾಂಗವಾದ ಏಳು ಕುರಿಗಳನ್ನು, ಒಂದು ಹೋರಿಯನ್ನು ಮತ್ತು ಎರಡು ಟಗರುಗಳನ್ನು ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆ ಮತ್ತು ಪಾನದ್ರವ್ಯದೊಡನೆ ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುವವು.
19ಅದಲ್ಲದೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋತವನ್ನು ಮತ್ತು ಸಮಾಧಾನ ಯಜ್ಞಕ್ಕಾಗಿ ಒಂದು ವರ್ಷದ ಎರಡು ಟಗರುಗಳನ್ನು ಸಮರ್ಪಿಸಬೇಕು.
20ಯಾಜಕನು ಇವುಗಳನ್ನು, ಪ್ರಥಮಫಲದ ರೊಟ್ಟಿಗಳನ್ನು ಮತ್ತು ಎರಡು ಕುರಿಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.
21ಆ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.
22“‘ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಹಕ್ಕಲಾಯಬಾರದು. ಇವುಗಳನ್ನು ಬಡವರಿಗೋಸ್ಕರವು ಹಾಗು ಪರದೇಶದವರಿಗೋಸ್ಕರವು ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು’” ಎಂದು ಹೇಳಿದನು.
23ಯೆಹೋವನು ಮೋಶೆಯೊಂದಿಗೆ ಮಾತನಾಡಿ,
24“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತ್ತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಸೇರಬೇಕು.
25ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು; ಯೆಹೋವನಿಗೆ ಹೋಮವನ್ನು ಮಾಡಬೇಕು’” ಅಂದನು.
26ಯೆಹೋವನು ಮೋಶೆಯೊಂದಿಗೆ ಮಾತನಾಡಿ,
27“ಅದೇ ಏಳನೆಯ ತಿಂಗಳಿನ ಹತ್ತನೆಯ ದಿನ ದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.
28ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.
29ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.
30ಯಾವನಾದರೂ ಆ ದಿನದಲ್ಲಿ ಕೆಲಸವನ್ನು ಮಾಡಿದರೆ ಅವನನ್ನು ಇಸ್ರಾಯೇಲರಲ್ಲಿ ಇರದಂತೆ ನಾಶಮಾಡುವೆನು.
31ಆ ದಿನದಲ್ಲಿ ಯಾವ ಕೆಲಸವನ್ನು ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.

Read ಯಾಜ 23ಯಾಜ 23
Compare ಯಾಜ 23:4-31ಯಾಜ 23:4-31