Text copied!
Bibles in Kannada

ಯಾಜ 23:40-43 in Kannada

Help us?

ಯಾಜ 23:40-43 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಮೊದಲನೆಯ ದಿನದಲ್ಲಿ ಶ್ರೇಷ್ಠವೃಕ್ಷದ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳ ವರೆಗೆ ಸಂಭ್ರಮವಾಗಿರಬೇಕು.
41 ಹೀಗೆ ಪ್ರತಿ ವರ್ಷದಲ್ಲಿಯೂ ಏಳು ದಿನಗಳ ವರೆಗೆ ಈ ಹಬ್ಬವನ್ನು ಆಚರಿಸಬೇಕು; ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಇದು ಶಾಶ್ವತನಿಯಮ; ಏಳನೆಯ ತಿಂಗಳಿನಲ್ಲಿ ಇದನ್ನು ಆಚರಿಸಬೇಕು.
42 ಏಳು ದಿನಗಳು ನೀವು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕು, ಸ್ವದೇಶಸ್ಥರಾದ ಇಸ್ರಾಯೇಲರೆಲ್ಲರೂ ಪರ್ಣಶಾಲೆಗಳಲ್ಲಿಯೇ ವಾಸವಾಗಿರಬೇಕು.
43 ನಾನು ನಿಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದಾಗ ಇಸ್ರಾಯೇಲರು ಪರ್ಣಶಾಲೆಗಳಲ್ಲಿ ವಾಸವಾಗಿರುವಂತೆ ಮಾಡಿದೆನೆಂಬುದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವುದು. ನಾನು ನಿಮ್ಮ ದೇವರಾದ ಯೆಹೋವನು’” ಅಂದನು.
ಯಾಜ 23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019