Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 24

ಯಾಜ 24:12-21

Help us?
Click on verse(s) to share them!
12ಅವನ ವಿಷಯವಾಗಿ ಯೆಹೋವನ ತೀರ್ಪನ್ನು ತಿಳುಕೊಳ್ಳುವ ತನಕ ಅವನನ್ನು ಕಾವಲಲ್ಲಿರಿಸಿದರು.
13ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
14“ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.
15ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು.
16ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣ ಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇ ಆಗಿರಲಿ ಅಥವಾ ಸ್ವದೇಶಸ್ಥನೇ ಆಗಿರಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.
17“‘ಮನುಷ್ಯನನ್ನು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.
18ಪಶುವನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು, ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು.
19ಯಾವನಾದರೂ ಮತ್ತೊಬ್ಬನನ್ನು ಅಂಗಹೀನಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಿಸಬೇಕು.
20ಅವಯವವನ್ನು ಮುರಿದವನಿಗೆ ಅವಯವವನ್ನು ಮುರಿಯುವುದೇ ಶಿಕ್ಷೆ. ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗೆಸಬೇಕು. ಮತ್ತೊಬ್ಬನನ್ನು ಅಂಗಹೀನ ಮಾಡಿದವನಿಗೆ ಈ ಪ್ರಕಾರ ಪ್ರತಿಕಾರ ಮಾಡಬೇಕು.
21ಪಶುವನ್ನು ಕೊಂದವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು.

Read ಯಾಜ 24ಯಾಜ 24
Compare ಯಾಜ 24:12-21ಯಾಜ 24:12-21