Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 24

ಯಾಜ 24:7-16

Help us?
Click on verse(s) to share them!
7ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವುದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಬೇಕು.
8ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಕ್ರಮಪಡಿಸಬೇಕು. ಶಾಶ್ವತವಾದ ನಿಬಂಧನೆಯ ಮೇರೆಗೆ ಅವುಗಳನ್ನು ಇಸ್ರಾಯೇಲರಿಗೋಸ್ಕರ ಯೆಹೋವನಿಗೆ ಸಮರ್ಪಿಸಬೇಕು.
9ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು” ಅಂದನು.
10ಇಸ್ರಾಯೇಲ್ ಸ್ತ್ರೀಯಲ್ಲಿ ಐಗುಪ್ತ ಪುರುಷನಿಂದ ಹುಟ್ಟಿದವನೊಬ್ಬನು ಇಸ್ರಾಯೇಲರ ಪಾಳೆಯದಲ್ಲಿ, ಇಸ್ರಾಯೇಲನಾದ ಒಬ್ಬ ಮನುಷ್ಯನ ಸಂಗಡ ಜಗಳವಾಡುತ್ತಾ ಬಂದನು.
11ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ಶಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾನ್ ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬುವವಳು.
12ಅವನ ವಿಷಯವಾಗಿ ಯೆಹೋವನ ತೀರ್ಪನ್ನು ತಿಳುಕೊಳ್ಳುವ ತನಕ ಅವನನ್ನು ಕಾವಲಲ್ಲಿರಿಸಿದರು.
13ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
14“ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.
15ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು.
16ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣ ಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇ ಆಗಿರಲಿ ಅಥವಾ ಸ್ವದೇಶಸ್ಥನೇ ಆಗಿರಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.

Read ಯಾಜ 24ಯಾಜ 24
Compare ಯಾಜ 24:7-16ಯಾಜ 24:7-16