Text copied!
Bibles in Kannada

ಯಾಜ 25:11-22 in Kannada

Help us?

ಯಾಜ 25:11-22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಐವತ್ತನೆಯ ವರ್ಷದಲ್ಲಿ ಅಂದರೆ ಜೂಬಿಲಿ ಸಂವತ್ಸರದಲ್ಲಿ ನೀವು ಬೀಜವನ್ನು ಬಿತ್ತಬಾರದು, ತಾನಾಗಿ ಬೆಳೆದ ಪೈರನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬೆಳದ ಹಣ್ಣನ್ನು ಸಂಗ್ರಹಿಸಬಾರದು.
12 ಅದು ಜೂಬಿಲಿ ವರ್ಷವಾದುದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬೇಕು.
13 “‘ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ತಿರುಗಿ ನಿಮ್ಮ ವಶಕ್ಕೆ ಬರುವವು.
14 ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ ಮತ್ತು ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು.
15 ಹಿಂದಿನ ಜೂಬಿಲಿ ಸಂವತ್ಸರದಿಂದ ಎಷ್ಟು ವರ್ಷವಾಯಿತೆಂದು ಲೆಕ್ಕಿಸಿ, ಸ್ವದೇಶದವನಿಂದ ಕ್ರಯಕ್ಕೆ ತೆಗೆದುಕೊಳ್ಳಬೇಕು; ಅದರಂತೆ ಮಾರುವವನು ಎಷ್ಟು ವರ್ಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು.
16 ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು, ಕಡಿಮೆಯಾದರೆ ಕಡಿಮೆ ಮಾಡಬೇಕು; ಏಕೆಂದರೆ ಅವನು ಮಾರುವುದು ಭೂಮಿಯನ್ನಲ್ಲ, ಲೆಕ್ಕದ ಪ್ರಕಾರ ಬೆಳೆಗಳನ್ನೇ ಮಾರುತ್ತಾನಲ್ಲಾ.
17 ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.
18 “‘ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ಆ ದೇಶದಲ್ಲಿ ನಿರ್ಭಯವಾಗಿ ವಾಸವಾಗಿರುವಿರಿ.
19 ನಿಮ್ಮ ಭೂಮಿಯು ಫಲವತ್ತಾಗುವುದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ.
20 “‘ಏಳನೆಯ ವರ್ಷದಲ್ಲಿ ಬೀಜವನ್ನು ಬಿತ್ತುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆ ಇಲ್ಲವಲ್ಲಾ; ಆ ವರ್ಷದಲ್ಲಿ ಏನು ತಿನ್ನಬೇಕು?’ ಎಂದು ವಿಚಾರಿಸುತ್ತೀರೋ
21 ಕೇಳಿರಿ, ಆರನೆಯ ವರ್ಷದ ಬೆಳೆ ನನ್ನ ಅನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.
22 ನೀವು ಎಂಟನೆಯ ವರ್ಷದಲ್ಲಿ ಬೀಜವನ್ನು ಬಿತ್ತಿ, ಅದರ ಬೆಳೆ ದೊರೆಯುವ ತನಕ ಅಂದರೆ ಒಂಭತ್ತನೆಯ ವರ್ಷದ ವರೆಗೆ ಹಿಂದಿನ ವರ್ಷಗಳಲ್ಲಿ ನೀವು ಸಂಗ್ರಹಿಸಿದ ಬೆಳೆಯಿಂದಲೇ ಜೀವನಮಾಡುವಿರಿ.
ಯಾಜ 25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019