Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 25

ಯಾಜ 25:12-29

Help us?
Click on verse(s) to share them!
12ಅದು ಜೂಬಿಲಿ ವರ್ಷವಾದುದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬೇಕು.
13“‘ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ತಿರುಗಿ ನಿಮ್ಮ ವಶಕ್ಕೆ ಬರುವವು.
14ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ ಮತ್ತು ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು.
15ಹಿಂದಿನ ಜೂಬಿಲಿ ಸಂವತ್ಸರದಿಂದ ಎಷ್ಟು ವರ್ಷವಾಯಿತೆಂದು ಲೆಕ್ಕಿಸಿ, ಸ್ವದೇಶದವನಿಂದ ಕ್ರಯಕ್ಕೆ ತೆಗೆದುಕೊಳ್ಳಬೇಕು; ಅದರಂತೆ ಮಾರುವವನು ಎಷ್ಟು ವರ್ಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು.
16ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು, ಕಡಿಮೆಯಾದರೆ ಕಡಿಮೆ ಮಾಡಬೇಕು; ಏಕೆಂದರೆ ಅವನು ಮಾರುವುದು ಭೂಮಿಯನ್ನಲ್ಲ, ಲೆಕ್ಕದ ಪ್ರಕಾರ ಬೆಳೆಗಳನ್ನೇ ಮಾರುತ್ತಾನಲ್ಲಾ.
17ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.
18“‘ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ಆ ದೇಶದಲ್ಲಿ ನಿರ್ಭಯವಾಗಿ ವಾಸವಾಗಿರುವಿರಿ.
19ನಿಮ್ಮ ಭೂಮಿಯು ಫಲವತ್ತಾಗುವುದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ.
20“‘ಏಳನೆಯ ವರ್ಷದಲ್ಲಿ ಬೀಜವನ್ನು ಬಿತ್ತುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆ ಇಲ್ಲವಲ್ಲಾ; ಆ ವರ್ಷದಲ್ಲಿ ಏನು ತಿನ್ನಬೇಕು?’ ಎಂದು ವಿಚಾರಿಸುತ್ತೀರೋ
21ಕೇಳಿರಿ, ಆರನೆಯ ವರ್ಷದ ಬೆಳೆ ನನ್ನ ಅನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.
22ನೀವು ಎಂಟನೆಯ ವರ್ಷದಲ್ಲಿ ಬೀಜವನ್ನು ಬಿತ್ತಿ, ಅದರ ಬೆಳೆ ದೊರೆಯುವ ತನಕ ಅಂದರೆ ಒಂಭತ್ತನೆಯ ವರ್ಷದ ವರೆಗೆ ಹಿಂದಿನ ವರ್ಷಗಳಲ್ಲಿ ನೀವು ಸಂಗ್ರಹಿಸಿದ ಬೆಳೆಯಿಂದಲೇ ಜೀವನಮಾಡುವಿರಿ.
23“‘ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು.
24ನಿಮ್ಮಲ್ಲಿ ಮತ್ತೊಬ್ಬನ ಸ್ವತ್ತಿನ ಭೂಮಿ ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಅಧಿಕಾರವು ಕೊಟ್ಟವನಿಗೆ ಇರಬೇಕು.
25“‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.
26ಬಿಡಿಸುವ ಬಂಧುವು ಇಲ್ಲದೆಹೋದ ಪಕ್ಷಕ್ಕೆ ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಷ್ಟು ಹಣವನ್ನು ಸಂಪಾದಿಸಿದರೆ,
27ಆ ಭೂಮಿಯನ್ನು ಮಾರಿದಂದಿನಿಂದ ಕಳೆದ ವರ್ಷಗಳನ್ನು ಬಿಟ್ಟು ಉಳಿದ ಕ್ರಯವನ್ನು ಕೊಟ್ಟು ತನ್ನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು.
28ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು.
29“‘ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರ್ಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವುದು.

Read ಯಾಜ 25ಯಾಜ 25
Compare ಯಾಜ 25:12-29ಯಾಜ 25:12-29