Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 25

ಯಾಜ 25:3-8

Help us?
Click on verse(s) to share them!
3ಆರು ವರ್ಷಗಳು ನೀವು ಹೊಲದಲ್ಲಿ ಬೀಜವನ್ನು ಬಿತ್ತಬಹುದು, ದ್ರಾಕ್ಷಿ ತೋಟದ ಕೆಲಸವನ್ನು ನಡೆಸಬಹುದು ಮತ್ತು ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು.
4ಆದರೆ ಏಳನೆಯ ವರ್ಷ ಯಾವ ವ್ಯವಸಾಯ ಮಾಡಬಾರದ ವಿಶ್ರಾಂತಿ ಕಾಲವಾಗಿಯೂ ಮತ್ತು ಯೆಹೋವನಿಗೆ ಆಚರಿಸಬೇಕಾದ ಸಬ್ಬತ್ ಕಾಲವಾಗಿಯೂ ಇರಬೇಕು. ಹೊಲದಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿತೋಟದ ಕೆಲಸವನ್ನು ಮಾಡಬಾರದು.
5ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು, ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ಆ ವರ್ಷವೆಲ್ಲಾ ಭೂಮಿಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು.
6ಆದರೆ ಅಂತಹ ಸಬ್ಬತ್ ಸಂವತ್ಸರದಲ್ಲಿ ತಾನಾಗಿ ಭೂಮಿಯಲ್ಲಿ ಹುಟ್ಟಿದ್ದು ನಿಮಗೂ, ನಿಮ್ಮ ದಾಸದಾಸಿಯರಿಗೂ, ಕೂಲಿಯವರಿಗೂ,
7ನಿಮ್ಮ ಬಳಿಯಲ್ಲಿ ವಾಸವಾಗಿರುವವರಿಗೂ, ನಿಮ್ಮ ಪಶುಗಳಿಗೂ ಮತ್ತು ದೇಶದಲ್ಲಿರುವ ಕಾಡುಮೃಗಗಳಿಗೂ ಆಹಾರವಾಗಬಹುದು.
8“‘ಅದಲ್ಲದೆ ಏಳು ವರ್ಷಕ್ಕೊಂದರಂತೆ ಏಳು ಸಬ್ಬತ್ ವರ್ಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಲ್ವತ್ತೊಂಭತ್ತು ವರ್ಷಗಳು ಕಳೆಯಬೇಕು.

Read ಯಾಜ 25ಯಾಜ 25
Compare ಯಾಜ 25:3-8ಯಾಜ 25:3-8