Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 25

ಯಾಜ 25:30-39

Help us?
Click on verse(s) to share them!
30ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರ್ಷದೊಳಗಾಗಿ ಬಿಡಿಸಿಕೊಳ್ಳಲು ಸಾಧ್ಯವಾಗದೆ ಹೋದರೆ, ಅದು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗಿ ಮಾರಿದವನಿಗೆ ಮತ್ತು ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು.
31ಪೌಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಲ್ಪಡಬೇಕು; ಅವುಗಳನ್ನು ಬಿಡಿಸುವ ಅಧಿಕಾರವಿದ್ದು, ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು.
32ಆದರೆ ಲೇವಿಯರ ಸ್ವತ್ತಾಗಿರುವ ಪಟ್ಟಣಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸುವ ಅಧಿಕಾರವು ಲೇವಿಯರಿಗೆ ಯಾವಾಗಲೂ ಇರುವುದು.
33ಲೇವಿಯರೊಳಗೆ ಯಾರೂ ಅದನ್ನು ಬಿಡಿಸದೆಹೋದರೆ, ಲೇವಿಯರ ಸ್ವಂತವಾಗಿರುವ ಅಂತಹ ಪಟ್ಟಣಗಳಲ್ಲಿ ಮಾರಲ್ಪಟ್ಟ ಮನೆ ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವುದು. ಲೇವಿಯರ ಪಟ್ಟಣಗಳಲ್ಲಿನ ಮನೆಗಳು ಇಸ್ರಾಯೇಲರ ಮಧ್ಯದಲ್ಲಿರುವ ಅವರ ಸ್ವಾಸ್ತ್ಯವಷ್ಡೆ.
34ಅವರು ತಮ್ಮ ಪಟ್ಟಣಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಬಾರದು. ಅವು ಅವರಿಗೆ ಶಾಶ್ವತವಾದ ಸ್ವತ್ತು.
35“‘ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು.
36ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು.
37ನೀವು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ದವಸಕೊಟ್ಟರೆ ಲಾಭವನ್ನು ಕೇಳಬಾರದು.
38ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವುದಕ್ಕೂ ಮತ್ತು ನಿಮಗೆ ಕಾನಾನ್ ದೇಶವನ್ನು ಕೊಡುವುದಕ್ಕೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದವನು ನಾನೇ.
39“‘ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು.

Read ಯಾಜ 25ಯಾಜ 25
Compare ಯಾಜ 25:30-39ಯಾಜ 25:30-39