Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 25

ಯಾಜ 25:35-47

Help us?
Click on verse(s) to share them!
35“‘ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು.
36ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು.
37ನೀವು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ದವಸಕೊಟ್ಟರೆ ಲಾಭವನ್ನು ಕೇಳಬಾರದು.
38ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವುದಕ್ಕೂ ಮತ್ತು ನಿಮಗೆ ಕಾನಾನ್ ದೇಶವನ್ನು ಕೊಡುವುದಕ್ಕೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದವನು ನಾನೇ.
39“‘ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು.
40ಅವನು ಕೂಲಿಯವನಂತೆಯೂ ಇಲ್ಲವೇ ಪ್ರವಾಸಿಯಂತೆಯೂ ನಿಮ್ಮ ಬಳಿಯಲ್ಲಿದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಯನ್ನು ಮಾಡಲಿ.
41ಆಗ ಅವನನ್ನೂ ಮತ್ತು ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವತ್ತಿಗೂ ಹೋಗಬಹುದು.
42ಅವರು ನನಗೆ ಗುಲಾಮರಾಗಿದ್ದಾರೆ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನು; ದಾಸರನ್ನು ಮಾರುವಂತೆ ಅವರನ್ನು ಮಾರಬಾರದು.
43ಅವರಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು; ನಿಮ್ಮ ದೇವರಿಗೆ ಭಯಪಡಬೇಕು.
44ನಿಮಗೆ ದಾಸದಾಸಿಯರು ಬೇಕಾಗಿದ್ದರೆ ಸುತ್ತಲಿರುವ ಅನ್ಯರನ್ನು ಕ್ರಯಕ್ಕೆ ತೆಗೆದುಕೊಳ್ಳಬಹುದು.
45ನಿಮ್ಮ ನಡುವೆ ಇರುವ ವಿದೇಶಿಯರನ್ನೂ ಮತ್ತು ನಿಮ್ಮ ದೇಶದಲ್ಲಿ ಅವರಿಂದ ಹುಟ್ಟಿದವರನ್ನೂ ಕ್ರಯಕ್ಕೆ ತೆಗೆದುಕೊಳ್ಳಬಹುದು; ಅಂಥವರು ನಿಮಗೆ ಸೊತ್ತಾಗಬಹುದು.
46ನೀವು ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸ್ವತ್ತಾಗಿ ಕೊಟ್ಟು ಬಿಡಬಹುದು. ಅವರನ್ನು ಶಾಶ್ವತ ದಾಸರನ್ನಾಗಿ ಮಾಡಿಕೊಳ್ಳಬಹುದು. ಇಸ್ರಾಯೇಲರಾದ ನೀವಾದರೋ ಎಲ್ಲರೂ ಸಹೋದರರಾಗಿರುವುದರಿಂದ ಒಬ್ಬರಿಂದ ಒಬ್ಬರು ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು.
47“‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿದ್ದು ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅಥವಾ ಅವನಿಗೆ ಸೇರಿದವನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.

Read ಯಾಜ 25ಯಾಜ 25
Compare ಯಾಜ 25:35-47ಯಾಜ 25:35-47