Text copied!
Bibles in Kannada

ಯಾಜ 25:36-52 in Kannada

Help us?

ಯಾಜ 25:36-52 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು.
37 ನೀವು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ದವಸಕೊಟ್ಟರೆ ಲಾಭವನ್ನು ಕೇಳಬಾರದು.
38 ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವುದಕ್ಕೂ ಮತ್ತು ನಿಮಗೆ ಕಾನಾನ್ ದೇಶವನ್ನು ಕೊಡುವುದಕ್ಕೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದವನು ನಾನೇ.
39 “‘ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು.
40 ಅವನು ಕೂಲಿಯವನಂತೆಯೂ ಇಲ್ಲವೇ ಪ್ರವಾಸಿಯಂತೆಯೂ ನಿಮ್ಮ ಬಳಿಯಲ್ಲಿದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಯನ್ನು ಮಾಡಲಿ.
41 ಆಗ ಅವನನ್ನೂ ಮತ್ತು ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವತ್ತಿಗೂ ಹೋಗಬಹುದು.
42 ಅವರು ನನಗೆ ಗುಲಾಮರಾಗಿದ್ದಾರೆ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನು; ದಾಸರನ್ನು ಮಾರುವಂತೆ ಅವರನ್ನು ಮಾರಬಾರದು.
43 ಅವರಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು; ನಿಮ್ಮ ದೇವರಿಗೆ ಭಯಪಡಬೇಕು.
44 ನಿಮಗೆ ದಾಸದಾಸಿಯರು ಬೇಕಾಗಿದ್ದರೆ ಸುತ್ತಲಿರುವ ಅನ್ಯರನ್ನು ಕ್ರಯಕ್ಕೆ ತೆಗೆದುಕೊಳ್ಳಬಹುದು.
45 ನಿಮ್ಮ ನಡುವೆ ಇರುವ ವಿದೇಶಿಯರನ್ನೂ ಮತ್ತು ನಿಮ್ಮ ದೇಶದಲ್ಲಿ ಅವರಿಂದ ಹುಟ್ಟಿದವರನ್ನೂ ಕ್ರಯಕ್ಕೆ ತೆಗೆದುಕೊಳ್ಳಬಹುದು; ಅಂಥವರು ನಿಮಗೆ ಸೊತ್ತಾಗಬಹುದು.
46 ನೀವು ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸ್ವತ್ತಾಗಿ ಕೊಟ್ಟು ಬಿಡಬಹುದು. ಅವರನ್ನು ಶಾಶ್ವತ ದಾಸರನ್ನಾಗಿ ಮಾಡಿಕೊಳ್ಳಬಹುದು. ಇಸ್ರಾಯೇಲರಾದ ನೀವಾದರೋ ಎಲ್ಲರೂ ಸಹೋದರರಾಗಿರುವುದರಿಂದ ಒಬ್ಬರಿಂದ ಒಬ್ಬರು ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು.
47 “‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿದ್ದು ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅಥವಾ ಅವನಿಗೆ ಸೇರಿದವನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.
48 ಅವನ ಬಂಧುಗಳಲ್ಲಿ ಯಾರಾದರೂ ಈಡುಕೊಟ್ಟು ಅವನನ್ನು ಬಿಡಿಸಬಹುದು.
49 ಅವನ ದೊಡ್ಡಪ್ಪ, ಚಿಕ್ಕಪ್ಪಂದಿರಾಗಲಿ, ಇವರ ಮಕ್ಕಳಾಗಲಿ ಅಥವಾ ಸಮೀಪಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.
50 ಅವನು ತನ್ನನ್ನು ಮಾರಿಕೊಂಡ ವರ್ಷ ಮೊದಲುಗೊಂಡು ಮುಂದಣ ಜೂಬಿಲಿ ಸಂವತ್ಸರದ ತನಕ ದಣಿಯ ಸಂಗಡ ವರ್ಷಗಳ ಲೆಕ್ಕವನ್ನು ಮಾಡಿ ಆ ಲೆಕ್ಕದ ಮೇರೆಗೆ ಬಿಡುಗಡೆಯ ಕ್ರಯವನ್ನು ಕೊಡಬೇಕು. ಕೂಲಿಯವನ ವಿಷಯದಲ್ಲಿ ಲೆಕ್ಕ ಮಾಡುವಂತೆ ಅವನ ವಿಷಯದಲ್ಲಿಯೂ ಲೆಕ್ಕ ಮಾಡಬೇಕು.
51 ಜೂಬಿಲಿ ಸಂವತ್ಸರವು ಬರುವುದಕ್ಕೆ ಇನ್ನು ಅನೇಕ ವರ್ಷಗಳಿದ್ದರೆ ಅವುಗಳ ಪ್ರಕಾರವೇ ತನ್ನ ಬಿಡುಗಡೆಯ ಕ್ರಯವನ್ನೂ ಕೊಡಬೇಕು.
52 ಕೆಲವು ವರ್ಷಗಳು ಮಾತ್ರ ಉಳಿದರೆ ಸ್ವಲ್ಪಭಾಗವನ್ನೂ ದಣಿಗೆ ಕೊಟ್ಟು ತನ್ನನ್ನು ಬಿಡಿಸಿಕೊಳ್ಳಬೇಕು.
ಯಾಜ 25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019