Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 25

ಯಾಜ 25:4-40

Help us?
Click on verse(s) to share them!
4ಆದರೆ ಏಳನೆಯ ವರ್ಷ ಯಾವ ವ್ಯವಸಾಯ ಮಾಡಬಾರದ ವಿಶ್ರಾಂತಿ ಕಾಲವಾಗಿಯೂ ಮತ್ತು ಯೆಹೋವನಿಗೆ ಆಚರಿಸಬೇಕಾದ ಸಬ್ಬತ್ ಕಾಲವಾಗಿಯೂ ಇರಬೇಕು. ಹೊಲದಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿತೋಟದ ಕೆಲಸವನ್ನು ಮಾಡಬಾರದು.
5ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು, ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ಆ ವರ್ಷವೆಲ್ಲಾ ಭೂಮಿಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು.
6ಆದರೆ ಅಂತಹ ಸಬ್ಬತ್ ಸಂವತ್ಸರದಲ್ಲಿ ತಾನಾಗಿ ಭೂಮಿಯಲ್ಲಿ ಹುಟ್ಟಿದ್ದು ನಿಮಗೂ, ನಿಮ್ಮ ದಾಸದಾಸಿಯರಿಗೂ, ಕೂಲಿಯವರಿಗೂ,
7ನಿಮ್ಮ ಬಳಿಯಲ್ಲಿ ವಾಸವಾಗಿರುವವರಿಗೂ, ನಿಮ್ಮ ಪಶುಗಳಿಗೂ ಮತ್ತು ದೇಶದಲ್ಲಿರುವ ಕಾಡುಮೃಗಗಳಿಗೂ ಆಹಾರವಾಗಬಹುದು.
8“‘ಅದಲ್ಲದೆ ಏಳು ವರ್ಷಕ್ಕೊಂದರಂತೆ ಏಳು ಸಬ್ಬತ್ ವರ್ಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಲ್ವತ್ತೊಂಭತ್ತು ವರ್ಷಗಳು ಕಳೆಯಬೇಕು.
9ಆಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ದೇಶದಲ್ಲೆಲ್ಲಾ ಗಟ್ಟಿಯಾಗಿ ಕೊಂಬನ್ನು ಊದಿಸಬೇಕು. ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬನ್ನು ಊದಿಸಬೇಕು.
10ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು.
11ಆ ಐವತ್ತನೆಯ ವರ್ಷದಲ್ಲಿ ಅಂದರೆ ಜೂಬಿಲಿ ಸಂವತ್ಸರದಲ್ಲಿ ನೀವು ಬೀಜವನ್ನು ಬಿತ್ತಬಾರದು, ತಾನಾಗಿ ಬೆಳೆದ ಪೈರನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬೆಳದ ಹಣ್ಣನ್ನು ಸಂಗ್ರಹಿಸಬಾರದು.
12ಅದು ಜೂಬಿಲಿ ವರ್ಷವಾದುದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬೇಕು.
13“‘ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ತಿರುಗಿ ನಿಮ್ಮ ವಶಕ್ಕೆ ಬರುವವು.
14ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ ಮತ್ತು ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು.
15ಹಿಂದಿನ ಜೂಬಿಲಿ ಸಂವತ್ಸರದಿಂದ ಎಷ್ಟು ವರ್ಷವಾಯಿತೆಂದು ಲೆಕ್ಕಿಸಿ, ಸ್ವದೇಶದವನಿಂದ ಕ್ರಯಕ್ಕೆ ತೆಗೆದುಕೊಳ್ಳಬೇಕು; ಅದರಂತೆ ಮಾರುವವನು ಎಷ್ಟು ವರ್ಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು.
16ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು, ಕಡಿಮೆಯಾದರೆ ಕಡಿಮೆ ಮಾಡಬೇಕು; ಏಕೆಂದರೆ ಅವನು ಮಾರುವುದು ಭೂಮಿಯನ್ನಲ್ಲ, ಲೆಕ್ಕದ ಪ್ರಕಾರ ಬೆಳೆಗಳನ್ನೇ ಮಾರುತ್ತಾನಲ್ಲಾ.
17ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.
18“‘ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ಆ ದೇಶದಲ್ಲಿ ನಿರ್ಭಯವಾಗಿ ವಾಸವಾಗಿರುವಿರಿ.
19ನಿಮ್ಮ ಭೂಮಿಯು ಫಲವತ್ತಾಗುವುದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ.
20“‘ಏಳನೆಯ ವರ್ಷದಲ್ಲಿ ಬೀಜವನ್ನು ಬಿತ್ತುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆ ಇಲ್ಲವಲ್ಲಾ; ಆ ವರ್ಷದಲ್ಲಿ ಏನು ತಿನ್ನಬೇಕು?’ ಎಂದು ವಿಚಾರಿಸುತ್ತೀರೋ
21ಕೇಳಿರಿ, ಆರನೆಯ ವರ್ಷದ ಬೆಳೆ ನನ್ನ ಅನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.
22ನೀವು ಎಂಟನೆಯ ವರ್ಷದಲ್ಲಿ ಬೀಜವನ್ನು ಬಿತ್ತಿ, ಅದರ ಬೆಳೆ ದೊರೆಯುವ ತನಕ ಅಂದರೆ ಒಂಭತ್ತನೆಯ ವರ್ಷದ ವರೆಗೆ ಹಿಂದಿನ ವರ್ಷಗಳಲ್ಲಿ ನೀವು ಸಂಗ್ರಹಿಸಿದ ಬೆಳೆಯಿಂದಲೇ ಜೀವನಮಾಡುವಿರಿ.
23“‘ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು.
24ನಿಮ್ಮಲ್ಲಿ ಮತ್ತೊಬ್ಬನ ಸ್ವತ್ತಿನ ಭೂಮಿ ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಅಧಿಕಾರವು ಕೊಟ್ಟವನಿಗೆ ಇರಬೇಕು.
25“‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.
26ಬಿಡಿಸುವ ಬಂಧುವು ಇಲ್ಲದೆಹೋದ ಪಕ್ಷಕ್ಕೆ ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಷ್ಟು ಹಣವನ್ನು ಸಂಪಾದಿಸಿದರೆ,
27ಆ ಭೂಮಿಯನ್ನು ಮಾರಿದಂದಿನಿಂದ ಕಳೆದ ವರ್ಷಗಳನ್ನು ಬಿಟ್ಟು ಉಳಿದ ಕ್ರಯವನ್ನು ಕೊಟ್ಟು ತನ್ನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು.
28ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು.
29“‘ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರ್ಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವುದು.
30ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರ್ಷದೊಳಗಾಗಿ ಬಿಡಿಸಿಕೊಳ್ಳಲು ಸಾಧ್ಯವಾಗದೆ ಹೋದರೆ, ಅದು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗಿ ಮಾರಿದವನಿಗೆ ಮತ್ತು ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು.
31ಪೌಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಲ್ಪಡಬೇಕು; ಅವುಗಳನ್ನು ಬಿಡಿಸುವ ಅಧಿಕಾರವಿದ್ದು, ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು.
32ಆದರೆ ಲೇವಿಯರ ಸ್ವತ್ತಾಗಿರುವ ಪಟ್ಟಣಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸುವ ಅಧಿಕಾರವು ಲೇವಿಯರಿಗೆ ಯಾವಾಗಲೂ ಇರುವುದು.
33ಲೇವಿಯರೊಳಗೆ ಯಾರೂ ಅದನ್ನು ಬಿಡಿಸದೆಹೋದರೆ, ಲೇವಿಯರ ಸ್ವಂತವಾಗಿರುವ ಅಂತಹ ಪಟ್ಟಣಗಳಲ್ಲಿ ಮಾರಲ್ಪಟ್ಟ ಮನೆ ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವುದು. ಲೇವಿಯರ ಪಟ್ಟಣಗಳಲ್ಲಿನ ಮನೆಗಳು ಇಸ್ರಾಯೇಲರ ಮಧ್ಯದಲ್ಲಿರುವ ಅವರ ಸ್ವಾಸ್ತ್ಯವಷ್ಡೆ.
34ಅವರು ತಮ್ಮ ಪಟ್ಟಣಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಬಾರದು. ಅವು ಅವರಿಗೆ ಶಾಶ್ವತವಾದ ಸ್ವತ್ತು.
35“‘ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು.
36ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು.
37ನೀವು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ದವಸಕೊಟ್ಟರೆ ಲಾಭವನ್ನು ಕೇಳಬಾರದು.
38ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವುದಕ್ಕೂ ಮತ್ತು ನಿಮಗೆ ಕಾನಾನ್ ದೇಶವನ್ನು ಕೊಡುವುದಕ್ಕೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದವನು ನಾನೇ.
39“‘ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು.
40ಅವನು ಕೂಲಿಯವನಂತೆಯೂ ಇಲ್ಲವೇ ಪ್ರವಾಸಿಯಂತೆಯೂ ನಿಮ್ಮ ಬಳಿಯಲ್ಲಿದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಯನ್ನು ಮಾಡಲಿ.

Read ಯಾಜ 25ಯಾಜ 25
Compare ಯಾಜ 25:4-40ಯಾಜ 25:4-40