Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 26

ಯಾಜ 26:2-15

Help us?
Click on verse(s) to share them!
2ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.
3“ನೀವು ನನ್ನ ನಿಯಮಗಳನ್ನು ಕೈಕೊಂಡು, ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ,
4ನಾನು ಮುಂಗಾರು ಮತ್ತು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವವು ಹಾಗು ತೋಟದ ಮರಗಳು ಹೇರಳವಾದ ಫಲಕೊಡುವವು.
5ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.
6ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ.
7ನೀವು ನಿಮ್ಮ ವೈರಿಗಳನ್ನು ಓಡಿಸುವಿರಿ ಮತ್ತು ಅವರನ್ನು ಕತ್ತಿಯಿಂದ ಸಂಹರಿಸುವಿರಿ.
8ನಿಮ್ಮಲ್ಲಿ ಐದು ಜನರು ನೂರು ಜನರನ್ನೂ ಮತ್ತು ನೂರು ಜನರು ಹತ್ತು ಸಾವಿರ ಜನರನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.
9ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸುವೆನು; ನಿಮ್ಮೊಂದಿಗೆ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.
10ನೀವು ಬಹುದಿನದಿಂದ ಇಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ; ಹೊಸದಕ್ಕೆ ಸ್ಥಳ ಉಂಟಾಗುವಂತೆ ಹಳೆಯದನ್ನು ತೆಗೆಯುವಿರಿ.
11ನಾನು ನಿಮ್ಮ ನಡುವೆ ವಾಸಮಾಡುವೆನು; ನಿಮ್ಮನ್ನು ತಳ್ಳಿಬಿಡುವುದಿಲ್ಲ.
12ನಿಮ್ಮ ನಡುವೆ ತಿರುಗಾಡುತ್ತಾ ನಿಮಗೆ ದೇವರಾಗಿರುವೆನು, ನೀವು ನನಗೆ ಪ್ರಜೆಯಾಗಿರುವಿರಿ.
13ನೀವು ಐಗುಪ್ತ್ಯರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ; ನಿಮ್ಮನ್ನು ಕುಗ್ಗಿಸಿದ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನು.
14“ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,
15ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ,

Read ಯಾಜ 26ಯಾಜ 26
Compare ಯಾಜ 26:2-15ಯಾಜ 26:2-15