Text copied!
Bibles in Kannada

ಯಾಜ 26:24-30 in Kannada

Help us?

ಯಾಜ 26:24-30 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.
25 ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.
26 ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಜನರು ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿಸುಟ್ಟು, ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಊಟಮಾಡಿದಾಗ ತೃಪ್ತಿಹೊಂದುವುದಿಲ್ಲ.
27 “ಇದನ್ನೆಲ್ಲಾ ನೀವು ಅನುಭವಿಸಿದ ಮೇಲೆಯೂ ಇನ್ನೂ ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ,
28 ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು.
29 ನೀವು ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳ ಮಾಂಸವನ್ನೇ ತಿನ್ನುವಿರಿ.
30 ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.
ಯಾಜ 26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019