Text copied!
Bibles in Kannada

ಯಾಜ 27:10-18 in Kannada

Help us?

ಯಾಜ 27:10-18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದನ್ನು ಬದಲಾಯಿಸಬಾರದು, ಕೆಟ್ಟದ್ದಕ್ಕೆ ಬದಲಾಗಿ ಒಳ್ಳೆಯದನ್ನೂ ಇಲ್ಲವೇ ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನೂ, ಒಂದಕ್ಕೆ ಬದಲಾಗಿ ಬೇರೊಂದನ್ನೂ ಕೊಡಬಾರದು. ಅವನು ಗೊತ್ತುಮಾಡಿದ ಪಶುವಿಗೆ ಬದಲಾಗಿ ಬೇರೊಂದು ಪಶುವನ್ನು ಪ್ರತ್ಯೇಕಿಸಿಟ್ಟಿರುವ ಪಕ್ಷಕ್ಕೆ, ಮೊದಲನೆಯ ಪಶುವೂ ಹಾಗೂ ಅದಕ್ಕೆ ಬದಲಾಗಿ ಇಟ್ಟ ಪಶುವೂ ಎರಡೂ ಯೆಹೋವನದಾಗಿರಬೇಕು.
11 ಯೆಹೋವನಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಅದನ್ನು ಯಾಜಕನ ಮುಂದೆ ನಿಲ್ಲಿಸಬೇಕು.
12 ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂದು ಯಾಜಕನು ನೋಡಿಕೊಂಡು ಅದರ ಬೆಲೆ ಇಷ್ಟೆಂದು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆಯೇ ಅಂತಿಮವಾದದ್ದು ಸ್ಥಿರವಾಗಿರುವುದು.
13 ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.
14 “‘ಯಾವನಾದರೂ ತನ್ನ ಮನೆಯನ್ನು ಯೆಹೋವನಿಗೆ ಮೀಸಲಾಗಿ ಪ್ರತಿಷ್ಠಿಸಿದರೆ, ಯಾಜಕನು ಅದು ಉತ್ತಮವಾದ ಮನೆಯೋ ಅಲ್ಲವೋ ಎಂದು ಪರೀಕ್ಷಿಸಿ ಬೆಲೆಯನ್ನು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆ ಅಂತಿಮವಾಗಿರುವುದು.
15 ಹರಕೆಮಾಡಿದವನು ಪ್ರತಿಷ್ಠೆ ಮಾಡಿದ ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಮನೆ ಅವನದಾಗುವುದು.
16 “‘ಯಾವನಾದರೂ ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅದರಲ್ಲಿ ಇಷ್ಟು ಬೀಜವನ್ನು ಬಿತ್ತತಕ್ಕದ್ದು ಎಂದು ಆಲೋಚಿಸಿ ಅದರ ಬೆಲೆಯನ್ನು ನಿರ್ಣಯಿಸಬೇಕು. ಒಂದು ಓಮೆರ್ ಜವೆಗೋದಿಯನ್ನು ಬಿತ್ತಬಹುದಾದ ಹೊಲವು ಐವತ್ತು ಶೆಕೆಲ್ ಬೆಳ್ಳಿಯ ಬೆಲೆ ಬಾಳುವುದು.
17 ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದರೆ ಈ ಕ್ರಯ ಸ್ಥಿರವಾಗಿರುವುದು.
18 ಜೂಬಿಲಿ ಸಂವತ್ಸರದ ತರುವಾಯ ಪ್ರತಿಷ್ಠೆ ಮಾಡಿದ ಭೂಮಿಯನ್ನು ಹರಕೆಮಾಡಿದರೆ, ಮುಂದಣ ಜೂಬಿಲಿ ಸಂವತ್ಸರಕ್ಕೆ ಕಳೆಯಬೇಕಾದ ವರ್ಷಗಳ ಸಂಖ್ಯೆಯ ಮೇರೆಗೆ ಅದರ ಬೆಲೆಯನ್ನು ಕಡಿಮೆಮಾಡಬೇಕು.
ಯಾಜ 27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019