Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 27

ಯಾಜ 27:10-32

Help us?
Click on verse(s) to share them!
10ಅದನ್ನು ಬದಲಾಯಿಸಬಾರದು, ಕೆಟ್ಟದ್ದಕ್ಕೆ ಬದಲಾಗಿ ಒಳ್ಳೆಯದನ್ನೂ ಇಲ್ಲವೇ ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನೂ, ಒಂದಕ್ಕೆ ಬದಲಾಗಿ ಬೇರೊಂದನ್ನೂ ಕೊಡಬಾರದು. ಅವನು ಗೊತ್ತುಮಾಡಿದ ಪಶುವಿಗೆ ಬದಲಾಗಿ ಬೇರೊಂದು ಪಶುವನ್ನು ಪ್ರತ್ಯೇಕಿಸಿಟ್ಟಿರುವ ಪಕ್ಷಕ್ಕೆ, ಮೊದಲನೆಯ ಪಶುವೂ ಹಾಗೂ ಅದಕ್ಕೆ ಬದಲಾಗಿ ಇಟ್ಟ ಪಶುವೂ ಎರಡೂ ಯೆಹೋವನದಾಗಿರಬೇಕು.
11ಯೆಹೋವನಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಅದನ್ನು ಯಾಜಕನ ಮುಂದೆ ನಿಲ್ಲಿಸಬೇಕು.
12ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂದು ಯಾಜಕನು ನೋಡಿಕೊಂಡು ಅದರ ಬೆಲೆ ಇಷ್ಟೆಂದು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆಯೇ ಅಂತಿಮವಾದದ್ದು ಸ್ಥಿರವಾಗಿರುವುದು.
13ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.
14“‘ಯಾವನಾದರೂ ತನ್ನ ಮನೆಯನ್ನು ಯೆಹೋವನಿಗೆ ಮೀಸಲಾಗಿ ಪ್ರತಿಷ್ಠಿಸಿದರೆ, ಯಾಜಕನು ಅದು ಉತ್ತಮವಾದ ಮನೆಯೋ ಅಲ್ಲವೋ ಎಂದು ಪರೀಕ್ಷಿಸಿ ಬೆಲೆಯನ್ನು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆ ಅಂತಿಮವಾಗಿರುವುದು.
15ಹರಕೆಮಾಡಿದವನು ಪ್ರತಿಷ್ಠೆ ಮಾಡಿದ ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಮನೆ ಅವನದಾಗುವುದು.
16“‘ಯಾವನಾದರೂ ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅದರಲ್ಲಿ ಇಷ್ಟು ಬೀಜವನ್ನು ಬಿತ್ತತಕ್ಕದ್ದು ಎಂದು ಆಲೋಚಿಸಿ ಅದರ ಬೆಲೆಯನ್ನು ನಿರ್ಣಯಿಸಬೇಕು. ಒಂದು ಓಮೆರ್ ಜವೆಗೋದಿಯನ್ನು ಬಿತ್ತಬಹುದಾದ ಹೊಲವು ಐವತ್ತು ಶೆಕೆಲ್ ಬೆಳ್ಳಿಯ ಬೆಲೆ ಬಾಳುವುದು.
17ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದರೆ ಈ ಕ್ರಯ ಸ್ಥಿರವಾಗಿರುವುದು.
18ಜೂಬಿಲಿ ಸಂವತ್ಸರದ ತರುವಾಯ ಪ್ರತಿಷ್ಠೆ ಮಾಡಿದ ಭೂಮಿಯನ್ನು ಹರಕೆಮಾಡಿದರೆ, ಮುಂದಣ ಜೂಬಿಲಿ ಸಂವತ್ಸರಕ್ಕೆ ಕಳೆಯಬೇಕಾದ ವರ್ಷಗಳ ಸಂಖ್ಯೆಯ ಮೇರೆಗೆ ಅದರ ಬೆಲೆಯನ್ನು ಕಡಿಮೆಮಾಡಬೇಕು.
19ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿರುವ ಪಕ್ಷಕ್ಕೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಹೊಲ ಅವನದಾಗಿರುವುದು.
20ತಾನು ಅದನ್ನು ಬಿಡಿಸಿಕೊಳ್ಳದೆ ಮತ್ತೊಬ್ಬನಿಗೆ ಮಾರಿದರೆ ಮುಂದೆ ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ.
21ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.
22“‘ಯಾವನಾದರೂ ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,
23ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.
24ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ ಅಂದರೆ ಯಾರ ಪಿತ್ರಾರ್ಜಿತ ಭೂಮಿಗೆ ಸೇರಿದೆಯೋ ಅವನಿಗೆ ಪುನಃ ಬರಬೇಕು.
25ದೇವರ ಸೇವೆಯಲ್ಲಿ ನೇಮಕವಾದ ಎಲ್ಲಾ ತೂಕವು ದೇವಾಲಯದ ಶೆಕೆಲ್ ಮೇರೆಗೆ ಇರಬೇಕು. ಇಪ್ಪತ್ತು ಗೇರಾ ತೂಕವು ಒಂದು ಶೆಕೆಲಿಗೆ ಸಮವಾಗಿರಬೇಕೆಂದು ಯಾವಾಗಲೂ ನಿರ್ಣಯಿಸಬೇಕು.
26“‘ಶುದ್ಧ ಪಶುವಿನಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಯೆಹೋವನದಾಗಿರುವುದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಬಾರದು; ಹೋರಿಯಾಗಿದ್ದರೂ, ಆಡು ಅಥವಾ ಕುರಿಯಾಗಿದ್ದರೂ ಅದು ಯೆಹೋವನ ಸೊತ್ತೇ.
27ಅಶುದ್ಧ ಪಶುವಿನಲ್ಲಿ ಚೊಚ್ಚಲಮರಿ ಹುಟ್ಟಿದ್ದಾದರೆ ಹರಕೆಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆ ಹೋದರೆ ಅದನ್ನು ನಿರ್ಣಯಿಸಲ್ಪಟ್ಟ ಕ್ರಯಕ್ಕೆ ಮಾರಬೇಕು.
28“‘ಯಾವನಾದರೂ ಮನುಷ್ಯನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ ಅಥವಾ ಬೇರೆ ಯಾವುದನ್ನಾಗಲಿ ಯಾವ ಷರತ್ತೂ ಇಲ್ಲದೆ ಸಂಪೂರ್ಣವಾಗಿ ಯೆಹೋವನದಾಗಿರುವುದಕ್ಕೆ ಹರಕೆಮಾಡಿ ಕೊಟ್ಟರೆ, ಅದನ್ನು ಮಾರಲೂ ಬಾರದು, ಬಿಡಿಸಿಕೊಳ್ಳಲೂ ಬಾರದು. ಕೇವಲ ಯೆಹೋವನದಾಗಿರುವುದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು.
29ಕೇವಲ ಯೆಹೋವನ ಸೊತ್ತಾಗುವುದಕ್ಕೆ ಒಪ್ಪಿಸಲ್ಪಟ್ಟದ್ದು ಮನುಷ್ಯ ಜಾತಿಯಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು.
30“‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.
31ಯಾವನಾದರೂ ತಾನು ಕೊಡಬೇಕಾದ ಹತ್ತನೆಯ ಒಂದು ಪಾಲಿನಲ್ಲಿ ಏನಾದರೂ ಬಿಡಿಸಿಕೊಳ್ಳಬೇಕೆಂದಿದ್ದರೆ ಅಷ್ಟರೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.
32ದನಗಳಾಗಲಿ ಇಲ್ಲವೇ ಹಿಂಡಿನ ಆಡು ಅಥವಾ ಕುರಿಗಳಾಗಲಿ ಕುರುಬನು ಲೆಕ್ಕಮಾಡಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು.

Read ಯಾಜ 27ಯಾಜ 27
Compare ಯಾಜ 27:10-32ಯಾಜ 27:10-32