Text copied!
Bibles in Kannada

ಯಾಜ 27:15-24 in Kannada

Help us?

ಯಾಜ 27:15-24 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹರಕೆಮಾಡಿದವನು ಪ್ರತಿಷ್ಠೆ ಮಾಡಿದ ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಮನೆ ಅವನದಾಗುವುದು.
16 “‘ಯಾವನಾದರೂ ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅದರಲ್ಲಿ ಇಷ್ಟು ಬೀಜವನ್ನು ಬಿತ್ತತಕ್ಕದ್ದು ಎಂದು ಆಲೋಚಿಸಿ ಅದರ ಬೆಲೆಯನ್ನು ನಿರ್ಣಯಿಸಬೇಕು. ಒಂದು ಓಮೆರ್ ಜವೆಗೋದಿಯನ್ನು ಬಿತ್ತಬಹುದಾದ ಹೊಲವು ಐವತ್ತು ಶೆಕೆಲ್ ಬೆಳ್ಳಿಯ ಬೆಲೆ ಬಾಳುವುದು.
17 ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದರೆ ಈ ಕ್ರಯ ಸ್ಥಿರವಾಗಿರುವುದು.
18 ಜೂಬಿಲಿ ಸಂವತ್ಸರದ ತರುವಾಯ ಪ್ರತಿಷ್ಠೆ ಮಾಡಿದ ಭೂಮಿಯನ್ನು ಹರಕೆಮಾಡಿದರೆ, ಮುಂದಣ ಜೂಬಿಲಿ ಸಂವತ್ಸರಕ್ಕೆ ಕಳೆಯಬೇಕಾದ ವರ್ಷಗಳ ಸಂಖ್ಯೆಯ ಮೇರೆಗೆ ಅದರ ಬೆಲೆಯನ್ನು ಕಡಿಮೆಮಾಡಬೇಕು.
19 ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿರುವ ಪಕ್ಷಕ್ಕೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಹೊಲ ಅವನದಾಗಿರುವುದು.
20 ತಾನು ಅದನ್ನು ಬಿಡಿಸಿಕೊಳ್ಳದೆ ಮತ್ತೊಬ್ಬನಿಗೆ ಮಾರಿದರೆ ಮುಂದೆ ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ.
21 ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.
22 “‘ಯಾವನಾದರೂ ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,
23 ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.
24 ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ ಅಂದರೆ ಯಾರ ಪಿತ್ರಾರ್ಜಿತ ಭೂಮಿಗೆ ಸೇರಿದೆಯೋ ಅವನಿಗೆ ಪುನಃ ಬರಬೇಕು.
ಯಾಜ 27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019