Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 27

ಯಾಜ 27:20-26

Help us?
Click on verse(s) to share them!
20ತಾನು ಅದನ್ನು ಬಿಡಿಸಿಕೊಳ್ಳದೆ ಮತ್ತೊಬ್ಬನಿಗೆ ಮಾರಿದರೆ ಮುಂದೆ ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ.
21ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.
22“‘ಯಾವನಾದರೂ ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,
23ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.
24ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ ಅಂದರೆ ಯಾರ ಪಿತ್ರಾರ್ಜಿತ ಭೂಮಿಗೆ ಸೇರಿದೆಯೋ ಅವನಿಗೆ ಪುನಃ ಬರಬೇಕು.
25ದೇವರ ಸೇವೆಯಲ್ಲಿ ನೇಮಕವಾದ ಎಲ್ಲಾ ತೂಕವು ದೇವಾಲಯದ ಶೆಕೆಲ್ ಮೇರೆಗೆ ಇರಬೇಕು. ಇಪ್ಪತ್ತು ಗೇರಾ ತೂಕವು ಒಂದು ಶೆಕೆಲಿಗೆ ಸಮವಾಗಿರಬೇಕೆಂದು ಯಾವಾಗಲೂ ನಿರ್ಣಯಿಸಬೇಕು.
26“‘ಶುದ್ಧ ಪಶುವಿನಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಯೆಹೋವನದಾಗಿರುವುದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಬಾರದು; ಹೋರಿಯಾಗಿದ್ದರೂ, ಆಡು ಅಥವಾ ಕುರಿಯಾಗಿದ್ದರೂ ಅದು ಯೆಹೋವನ ಸೊತ್ತೇ.

Read ಯಾಜ 27ಯಾಜ 27
Compare ಯಾಜ 27:20-26ಯಾಜ 27:20-26