Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 27

ಯಾಜ 27:4-9

Help us?
Click on verse(s) to share them!
4ಅದೇ ವಯಸ್ಸಿನ ಸ್ತ್ರೀಗೋಸ್ಕರ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
5ಐದು ವರ್ಷದ ವಯಸ್ಸಿನಿಂದ ಇಪ್ಪತ್ತು ವರ್ಷದ ವಯಸ್ಸಿನ ವರೆಗೆ ಪುರುಷನಿಗೋಸ್ಕರ ಇಪ್ಪತ್ತು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
6ಒಂದು ತಿಂಗಳಿನ ವಯಸ್ಸು ಮೊದಲುಗೊಂಡು ಐದು ವರ್ಷದ ವಯಸ್ಸಿನ ಹುಡುಗನಿಗೋಸ್ಕರ ಐದು ಶೆಕೆಲ್ ಬೆಳ್ಳಿಯನ್ನು, ಹುಡುಗಿಗೋಸ್ಕರ ಮೂರು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
7ಅರವತ್ತು ವರ್ಷಗಳ ಪ್ರಾಯವನ್ನು ದಾಟಿದ ಪುರುಷನಿಗೋಸ್ಕರ ಹದಿನೈದು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
8ಯಾವನಾದರೂ ಬಡವನಾಗಿ ನೇಮಕವಾದ ಹಣವನ್ನು ಕೊಡಲಾರದೆ ಹೋದರೆ, ಅವನು ಹರಕೆಮಾಡಿ ಪ್ರತಿಷ್ಠಿಸಿದ ಮನುಷ್ಯನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ಕೊಡಬೇಕಾದ ಹಣ ಇಷ್ಟೆಂದು ನಿರ್ಣಯಿಸಬೇಕು.
9“‘ಯೆಹೋವನಿಗೆ ಸಮರ್ಪಿಸಬಹುದಾದ ಪಶುವನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದಾದರೆ ಅದು ದೇವರ ಸೊತ್ತಾಗಿರಬೇಕು.

Read ಯಾಜ 27ಯಾಜ 27
Compare ಯಾಜ 27:4-9ಯಾಜ 27:4-9