Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 27

ಯಾಜ 27:8-12

Help us?
Click on verse(s) to share them!
8ಯಾವನಾದರೂ ಬಡವನಾಗಿ ನೇಮಕವಾದ ಹಣವನ್ನು ಕೊಡಲಾರದೆ ಹೋದರೆ, ಅವನು ಹರಕೆಮಾಡಿ ಪ್ರತಿಷ್ಠಿಸಿದ ಮನುಷ್ಯನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ಕೊಡಬೇಕಾದ ಹಣ ಇಷ್ಟೆಂದು ನಿರ್ಣಯಿಸಬೇಕು.
9“‘ಯೆಹೋವನಿಗೆ ಸಮರ್ಪಿಸಬಹುದಾದ ಪಶುವನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದಾದರೆ ಅದು ದೇವರ ಸೊತ್ತಾಗಿರಬೇಕು.
10ಅದನ್ನು ಬದಲಾಯಿಸಬಾರದು, ಕೆಟ್ಟದ್ದಕ್ಕೆ ಬದಲಾಗಿ ಒಳ್ಳೆಯದನ್ನೂ ಇಲ್ಲವೇ ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನೂ, ಒಂದಕ್ಕೆ ಬದಲಾಗಿ ಬೇರೊಂದನ್ನೂ ಕೊಡಬಾರದು. ಅವನು ಗೊತ್ತುಮಾಡಿದ ಪಶುವಿಗೆ ಬದಲಾಗಿ ಬೇರೊಂದು ಪಶುವನ್ನು ಪ್ರತ್ಯೇಕಿಸಿಟ್ಟಿರುವ ಪಕ್ಷಕ್ಕೆ, ಮೊದಲನೆಯ ಪಶುವೂ ಹಾಗೂ ಅದಕ್ಕೆ ಬದಲಾಗಿ ಇಟ್ಟ ಪಶುವೂ ಎರಡೂ ಯೆಹೋವನದಾಗಿರಬೇಕು.
11ಯೆಹೋವನಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಅದನ್ನು ಯಾಜಕನ ಮುಂದೆ ನಿಲ್ಲಿಸಬೇಕು.
12ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂದು ಯಾಜಕನು ನೋಡಿಕೊಂಡು ಅದರ ಬೆಲೆ ಇಷ್ಟೆಂದು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆಯೇ ಅಂತಿಮವಾದದ್ದು ಸ್ಥಿರವಾಗಿರುವುದು.

Read ಯಾಜ 27ಯಾಜ 27
Compare ಯಾಜ 27:8-12ಯಾಜ 27:8-12