Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 3

ಯಾಜ 3:12-16

Help us?
Click on verse(s) to share them!
12“‘ಸಮರ್ಪಿಸುವಂಥದ್ದು ಆಡು ಆಗಿದ್ದರೆ ಅರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
13ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು, ದೇವದರ್ಶನ ಗುಡಾರದ ಎದುರಾಗಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
14ಅದರ ಅಂಗಾಂಶದ ಕೊಬ್ಬನ್ನು ಮತ್ತು ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
15ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ಯೆಹೋವನಿಗೋಸ್ಕರ ಅಗ್ನಿಯ ಮೂಲಕ ಸಮರ್ಪಿಸಬೇಕು.
16ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮದ ರೂಪವಾಗಿ ಅರ್ಪಿಸಿದ ಆಹಾರವಾಗಿರುವುದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.

Read ಯಾಜ 3ಯಾಜ 3
Compare ಯಾಜ 3:12-16ಯಾಜ 3:12-16