Text copied!
Bibles in Kannada

ಯಾಜ 4:16-21 in Kannada

Help us?

ಯಾಜ 4:16-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನ ಗುಡಾರದೊಳಗೆ ತಂದು,
17 ಅದರಲ್ಲಿ ಬೆರಳನ್ನು ಅದ್ದಿ, ತೆರೆಯ ಮುಂದೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿಮುಕಿಸಬೇಕು.
18 ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
19 ಅವನು ಹೋರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು.
20 ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.
21 ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ.
ಯಾಜ 4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019