Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 4

ಯಾಜ 4:20-27

Help us?
Click on verse(s) to share them!
20ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.
21ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ.
22“‘ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
23ತನ್ನ ತಪ್ಪು ತನಗೆ ತಿಳಿದುಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು.
24ಅವನು ಆ ಹೋತದ ತಲೆಯ ಮೇಲೆ ಕೈಯನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಯಜ್ಞ.
25ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
26ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
27“‘ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,

Read ಯಾಜ 4ಯಾಜ 4
Compare ಯಾಜ 4:20-27ಯಾಜ 4:20-27