Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 4

ಯಾಜ 4:23-34

Help us?
Click on verse(s) to share them!
23ತನ್ನ ತಪ್ಪು ತನಗೆ ತಿಳಿದುಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು.
24ಅವನು ಆ ಹೋತದ ತಲೆಯ ಮೇಲೆ ಕೈಯನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಯಜ್ಞ.
25ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
26ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
27“‘ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
28ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.
29ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು.
30ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
31ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
32“‘ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.
33ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ದೋಷಪರಿಹಾರಕ್ಕಾಗಿ ವಧಿಸಬೇಕು.
34ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

Read ಯಾಜ 4ಯಾಜ 4
Compare ಯಾಜ 4:23-34ಯಾಜ 4:23-34