Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 4

ಯಾಜ 4:5-10

Help us?
Click on verse(s) to share them!
5ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು.
6ಯಾಜಕನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಮಹಾಪವಿತ್ರಸ್ಥಾನದ ಮುಂದಿನ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.
7ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
8ಆ ದೋಷಪರಿಹಾರಕ ಯಜ್ಞದ ಹೋರಿಯ ಕೊಬ್ಬನ್ನೆಲ್ಲಾ ಅಂದರೆ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಕೊಬ್ಬನ್ನು,
9ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದ ಹತ್ತಿರ ಇರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರದಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆದುಬಿಡಬೇಕು.
10ಅವನು ಅವುಗಳನ್ನು ಸಮಾಧಾನಯಜ್ಞದ ಹೋರಿಯಲ್ಲಿ ಪ್ರತ್ಯೇಕಿಸಿದಂತೆಯೇ ಇದರಲ್ಲಿಯೂ ಪ್ರತ್ಯೇಕಿಸಿ ಸರ್ವಾಂಗಹೋಮದ ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.

Read ಯಾಜ 4ಯಾಜ 4
Compare ಯಾಜ 4:5-10ಯಾಜ 4:5-10