Text copied!
Bibles in Kannada

ಯಾಜ 4:6-10 in Kannada

Help us?

ಯಾಜ 4:6-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾಜಕನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಮಹಾಪವಿತ್ರಸ್ಥಾನದ ಮುಂದಿನ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.
7 ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
8 ಆ ದೋಷಪರಿಹಾರಕ ಯಜ್ಞದ ಹೋರಿಯ ಕೊಬ್ಬನ್ನೆಲ್ಲಾ ಅಂದರೆ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಕೊಬ್ಬನ್ನು,
9 ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದ ಹತ್ತಿರ ಇರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರದಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆದುಬಿಡಬೇಕು.
10 ಅವನು ಅವುಗಳನ್ನು ಸಮಾಧಾನಯಜ್ಞದ ಹೋರಿಯಲ್ಲಿ ಪ್ರತ್ಯೇಕಿಸಿದಂತೆಯೇ ಇದರಲ್ಲಿಯೂ ಪ್ರತ್ಯೇಕಿಸಿ ಸರ್ವಾಂಗಹೋಮದ ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.
ಯಾಜ 4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019