Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 5

ಯಾಜ 5:15-17

Help us?
Click on verse(s) to share them!
15“ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.
16ಅವನು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ಪವಿತ್ರ ವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
17“ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ, ಅದು ಅವನಿಗೆ ತಿಳಿಯದೆ ಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.

Read ಯಾಜ 5ಯಾಜ 5
Compare ಯಾಜ 5:15-17ಯಾಜ 5:15-17