Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 5

ಯಾಜ 5:2-6

Help us?
Click on verse(s) to share them!
2ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಮತ್ತು ಜಂತು ಇವುಗಳ ಹೆಣವಾಗಲಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ, ದೇವರು ಅದನ್ನು ಅಶುದ್ಧ ಎಂದು ಪರಿಗಣಿಸುವುದರಿಂದ ಅವನಿಗೆ ತಿಳಿಯದೆ ಹೋದರೂ ಅವನು ಅಶುದ್ಧನೂ ಮತ್ತು ದೋಷಿಯೂ ಆಗಿರುವನು.
3ಮನುಷ್ಯದೇಹದಿಂದ ಉಂಟಾದ ಯಾವುದಾದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ಅದು ಅವನಿಗೆ ತಿಳಿದುಬಂದಾಗ ಅವನು ದೋಷಿಯಾಗುವನು.
4ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಅಥವಾ ಕೇಡಿಗಾಗಲಿ ಯಾವುದಾದರೂ ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು.
5ಅವನು ಈ ವಿಷಯಗಳಲ್ಲಿ ಯಾವುದಾದರೂ ಒಂದರಲ್ಲಿ ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು.
6ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.

Read ಯಾಜ 5ಯಾಜ 5
Compare ಯಾಜ 5:2-6ಯಾಜ 5:2-6