Text copied!
Bibles in Kannada

ಯಾಜ 5:2-6 in Kannada

Help us?

ಯಾಜ 5:2-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಮತ್ತು ಜಂತು ಇವುಗಳ ಹೆಣವಾಗಲಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ, ದೇವರು ಅದನ್ನು ಅಶುದ್ಧ ಎಂದು ಪರಿಗಣಿಸುವುದರಿಂದ ಅವನಿಗೆ ತಿಳಿಯದೆ ಹೋದರೂ ಅವನು ಅಶುದ್ಧನೂ ಮತ್ತು ದೋಷಿಯೂ ಆಗಿರುವನು.
3 ಮನುಷ್ಯದೇಹದಿಂದ ಉಂಟಾದ ಯಾವುದಾದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ಅದು ಅವನಿಗೆ ತಿಳಿದುಬಂದಾಗ ಅವನು ದೋಷಿಯಾಗುವನು.
4 ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಅಥವಾ ಕೇಡಿಗಾಗಲಿ ಯಾವುದಾದರೂ ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು.
5 ಅವನು ಈ ವಿಷಯಗಳಲ್ಲಿ ಯಾವುದಾದರೂ ಒಂದರಲ್ಲಿ ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು.
6 ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.
ಯಾಜ 5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019