Text copied!
Bibles in Kannada

ಯಾಜ 5:6-10 in Kannada

Help us?

ಯಾಜ 5:6-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.
7 “‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.
8 ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಆದರೆ ತಲೆಯನ್ನು ಪೂರ್ಣವಾಗಿ ತೆಗೆದುಬಿಡಬಾರದು.
9 ಆಗ ಅವನು ದೋಷಪರಿಹಾರಾರ್ಥವಾದ ಆ ಪಕ್ಷಿಯ ರಕ್ತದಲ್ಲಿ ಸ್ವಲ್ಪವನ್ನು ಯಜ್ಞವೇದಿಯ ಪಕ್ಕಕ್ಕೆ ಚಿಮುಕಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿಯಬೇಕು. ಅದು ದೋಷಪರಿಹಾರಕ ಯಜ್ಞ.
10 ಅವನು ಎರಡನೆಯ ಪಕ್ಷಿಯನ್ನು ನಿಯಮಗಳಿಗೆ ಅನುಸಾರವಾಗಿ ಅದೇ ರೀತಿಯಲ್ಲಿ ಸರ್ವಾಂಗಹೋಮ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
ಯಾಜ 5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019