Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 5

ಯಾಜ 5:8-14

Help us?
Click on verse(s) to share them!
8ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಆದರೆ ತಲೆಯನ್ನು ಪೂರ್ಣವಾಗಿ ತೆಗೆದುಬಿಡಬಾರದು.
9ಆಗ ಅವನು ದೋಷಪರಿಹಾರಾರ್ಥವಾದ ಆ ಪಕ್ಷಿಯ ರಕ್ತದಲ್ಲಿ ಸ್ವಲ್ಪವನ್ನು ಯಜ್ಞವೇದಿಯ ಪಕ್ಕಕ್ಕೆ ಚಿಮುಕಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿಯಬೇಕು. ಅದು ದೋಷಪರಿಹಾರಕ ಯಜ್ಞ.
10ಅವನು ಎರಡನೆಯ ಪಕ್ಷಿಯನ್ನು ನಿಯಮಗಳಿಗೆ ಅನುಸಾರವಾಗಿ ಅದೇ ರೀತಿಯಲ್ಲಿ ಸರ್ವಾಂಗಹೋಮ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
11“‘ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.
12ಅವನು ಯಾಜಕನ ಬಳಿಗೆ ಅದನ್ನು ತಂದನಂತರ ಅದು ದೈವಾರ್ಪಿತವೆಂದು ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಯಜ್ಞವೇದಿಯಲ್ಲಿ ಹೋಮಮಾಡಬೇಕು; ಅದು ದೋಷಪರಿಹಾರಕ ಯಜ್ಞ.
13ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ, ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವುದು. ಧಾನ್ಯನೈವೇದ್ಯ ದ್ರವ್ಯದಲ್ಲಿ ಉಳಿದದ್ದು ಹೇಗೆ ಯಾಜಕನಿಗೆ ಸಲ್ಲುತ್ತದೋ ಇದರಲ್ಲಿಯೂ ಉಳಿದದ್ದು ಯಾಜಕನಿಗೆ ಸಲ್ಲಬೇಕು.’”
14ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,

Read ಯಾಜ 5ಯಾಜ 5
Compare ಯಾಜ 5:8-14ಯಾಜ 5:8-14