Text copied!
Bibles in Kannada

ಯಾಜ 6:14-24 in Kannada

Help us?

ಯಾಜ 6:14-24 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “‘ಧಾನ್ಯನೈವೇದ್ಯ ವಿಷಯವಾದ ನಿಯಮಗಳು: ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.
15 ಅವರಲ್ಲಿ ಒಬ್ಬನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಅದರ ಮೇಲಿರುವ ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.
16 ಉಳಿದದ್ದನ್ನು ಆರೋನನೂ ಮತ್ತು ಅವನ ವಂಶದವರೂ ತಿನ್ನಬಹುದು; ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.
17 ಅದಕ್ಕೆ ಹುಳಿಹಿಟ್ಟು ಸೇರಿಸಿ ಸುಡಬಾರದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಮತ್ತು ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು.
18 ಆರೋನನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸಲ್ಲತಕ್ಕದ್ದೆಂಬುದು ಶಾಶ್ವತನಿಯಮ. ಆ ದ್ರವ್ಯಗಳಿಗೆ ತಗಲಿದ್ದೆಲ್ಲಾ ಪರಿಶುದ್ಧವಾಗುವುದು’” ಎಂದು ಹೇಳಿದನು.
19 ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,
20 “ಆರೋನನಿಗೆ ಅಭಿಷೇಕವಾದ ದಿನ ಮೊದಲುಗೊಂಡು ಅವನೂ ಮತ್ತು ಅವನ ವಂಶದವರೂ ಯೆಹೋವನಿಗೆ ಸಮರ್ಪಿಸಬೇಕಾದ ಧಾನ್ಯ ನೈವೇದ್ಯ ಕ್ರಮ ಹೇಗೆಂದರೆ, ಅವರು ನಿತ್ಯವೂ ಮೂರು ಸೇರು ಗೋದಿಹಿಟ್ಟನ್ನು, ಹೊತ್ತಾರೆ ಅರ್ಧವನ್ನು ಹಾಗೂ ಸಾಯಂಕಾಲ ಅರ್ಧವನ್ನು ಸಮರ್ಪಿಸಬೇಕು.
21 ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನಸಿದ್ದಾಗಿರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.
22 ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತನಾದ ಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ಯೆಹೋವನಿಗೆ ಸಂಪೂರ್ಣವಾಗಿ ಹೋಮಮಾಡಬೇಕು.
23 ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯದ್ರವ್ಯಗಳನ್ನು ಸಂಪೂರ್ಣವಾಗಿ ಹೋಮಮಾಡಬೇಕು; ಅದನ್ನು ತಿನ್ನಲೇಬಾರದು” ಎಂದು ಹೇಳಿದನು.
24 ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,
ಯಾಜ 6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019