Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 6

ಯಾಜ 6:2-9

Help us?
Click on verse(s) to share them!
2“ಯಾವನಾದರೂ ಪಾಪಮಾಡಿ, ಯೆಹೋವನಿಗೆ ವಿರುದ್ಧವಾಗಿ, ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ಅಥವಾ ತನ್ನ ಬಳಿಯಲ್ಲಿ ಇಡಲ್ಪಟ್ಟ ಅಡವಿಟ್ಟ ವಸ್ತುಗಳ ವಿಷಯದಲ್ಲಾಗಲಿ ಸುಳ್ಳಾಡುವುದರಿಂದ, ಮತ್ತೊಬ್ಬನನ್ನು ಮೋಸಗೊಳಿಸಿದ್ದರಿಂದ,
3ಮತ್ತೊಬ್ಬನು ಕಳೆದುಕೊಂಡದ್ದನ್ನು ತಾನು ಕಂಡು ಸುಳ್ಳಾಣೆಯಿಟ್ಟದ್ದರಿಂದ, ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿದರೆ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾಗುವನು.
4ಅವನು ಪಾಪಮಾಡಿ ಅಪರಾಧಿಯಾಗಿರುವುದರಿಂದ ಅವನು ತಾನು ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು ತನ್ನ ವಶಕ್ಕೆ ತೆಗೆದುಕೊಂಡದ್ದನ್ನು, ತಾನು ಕಂಡುಕೊಂಡದ್ದನ್ನು,
5ಬೇರೆ ಯಾವುದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನು ಪೂರ್ತಿಯಾಗಿ ತಂದುಕೊಡಬೇಕಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ನ್ಯಾಯವಾದ ಅದರ ಒಡೆಯನಿಗೆ ಹಿಂದಕ್ಕೆ ಕೊಡಬೇಕು.
6ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವನಿಗೆಂದು ಯಾಜಕನಿಗೆ ಒಪ್ಪಿಸಬೇಕು.
7ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು” ಎಂದು ಹೇಳಿದನು.
8ಅನಂತರ ಯೆಹೋವನು ಮೋಶೆಗೆ,
9“ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸು, ‘ಇವು ಸರ್ವಾಂಗಹೋಮ ವಿಷಯವಾದ ನಿಯಮಗಳು: ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮತ್ತು ಮರುದಿನದ ಬೆಳಗಿನ ವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದು ನಂದಬಾರದು.

Read ಯಾಜ 6ಯಾಜ 6
Compare ಯಾಜ 6:2-9ಯಾಜ 6:2-9