Text copied!
Bibles in Kannada

ಯಾಜ 6:2-9 in Kannada

Help us?

ಯಾಜ 6:2-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಯಾವನಾದರೂ ಪಾಪಮಾಡಿ, ಯೆಹೋವನಿಗೆ ವಿರುದ್ಧವಾಗಿ, ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ಅಥವಾ ತನ್ನ ಬಳಿಯಲ್ಲಿ ಇಡಲ್ಪಟ್ಟ ಅಡವಿಟ್ಟ ವಸ್ತುಗಳ ವಿಷಯದಲ್ಲಾಗಲಿ ಸುಳ್ಳಾಡುವುದರಿಂದ, ಮತ್ತೊಬ್ಬನನ್ನು ಮೋಸಗೊಳಿಸಿದ್ದರಿಂದ,
3 ಮತ್ತೊಬ್ಬನು ಕಳೆದುಕೊಂಡದ್ದನ್ನು ತಾನು ಕಂಡು ಸುಳ್ಳಾಣೆಯಿಟ್ಟದ್ದರಿಂದ, ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿದರೆ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾಗುವನು.
4 ಅವನು ಪಾಪಮಾಡಿ ಅಪರಾಧಿಯಾಗಿರುವುದರಿಂದ ಅವನು ತಾನು ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು ತನ್ನ ವಶಕ್ಕೆ ತೆಗೆದುಕೊಂಡದ್ದನ್ನು, ತಾನು ಕಂಡುಕೊಂಡದ್ದನ್ನು,
5 ಬೇರೆ ಯಾವುದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನು ಪೂರ್ತಿಯಾಗಿ ತಂದುಕೊಡಬೇಕಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ನ್ಯಾಯವಾದ ಅದರ ಒಡೆಯನಿಗೆ ಹಿಂದಕ್ಕೆ ಕೊಡಬೇಕು.
6 ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವನಿಗೆಂದು ಯಾಜಕನಿಗೆ ಒಪ್ಪಿಸಬೇಕು.
7 ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು” ಎಂದು ಹೇಳಿದನು.
8 ಅನಂತರ ಯೆಹೋವನು ಮೋಶೆಗೆ,
9 “ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸು, ‘ಇವು ಸರ್ವಾಂಗಹೋಮ ವಿಷಯವಾದ ನಿಯಮಗಳು: ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮತ್ತು ಮರುದಿನದ ಬೆಳಗಿನ ವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದು ನಂದಬಾರದು.
ಯಾಜ 6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019