Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 6

ಯಾಜ 6:21-26

Help us?
Click on verse(s) to share them!
21ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನಸಿದ್ದಾಗಿರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.
22ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತನಾದ ಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ಯೆಹೋವನಿಗೆ ಸಂಪೂರ್ಣವಾಗಿ ಹೋಮಮಾಡಬೇಕು.
23ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯದ್ರವ್ಯಗಳನ್ನು ಸಂಪೂರ್ಣವಾಗಿ ಹೋಮಮಾಡಬೇಕು; ಅದನ್ನು ತಿನ್ನಲೇಬಾರದು” ಎಂದು ಹೇಳಿದನು.
24ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,
25“ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಹೀಗೆ ಆಜ್ಞಾಪಿಸು, ‘ದೋಷಪರಿಹಾರಕ ಯಜ್ಞದ ನಿಯಮಗಳು: ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.
26ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.

Read ಯಾಜ 6ಯಾಜ 6
Compare ಯಾಜ 6:21-26ಯಾಜ 6:21-26